ಮಂಡ್ಯ: ರೈತರ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಂಡಿದೆ. ಕಾವೇರಿ ನದಿ ನೀರು ಬಿಡುಗಡೆ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ರೈತರು ರಸ್ತೆಗಿಳಿದಿದ್ದಾರೆ. ಈ ನಡುವೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತಿಭಟನೆ ವೇಳೆ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆಗೆ ಮುಂದಾಗಿದ್ದ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸ್ಥಳದಲ್ಲಿ ಭಾರೀ ಗದ್ದಲ ಏರ್ಪಟ್ಟು, ಪೊಲೀಸರೊಂದಿಗೆ ರೈತರು ವಾಗ್ವಾದಕ್ಕಿಳಿದಿದ್ದರು. ಈ ವೇಳೆ ರೈತರನ್ನು ಬಸ್‌ನಲ್ಲಿ ಹತ್ತಿಸಿ ಪೊಲೀಸರು ಕರೆದೊಯ್ದಿದ್ದಾರೆ. ಕಳೆದೆರಡು ದಿನದಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದು, ಇಂದು ಪ್ರತಿಭಟನೆ ಉಗ್ರರೂಪ ಪಡೆದುಕೊಂಡಿದೆ.
ಇದನ್ನೂ ಓದಿ: ‘ಮೊದಲೇ ಇವಕ್ಕೆ ದೇವರು-ದಿಂಡ್ರು ಮೇಲೆ ನಂಬಿಕೆ ಇಲ್ಲ, ಅದ್ಕೆ ಮಳೆಯೂ ಆಗ್ತಿಲ್ಲ’
ತಮಿಳುನಾಡಿಗೆ ನೀರು ಬಿಟ್ಟಿರುವುದನ್ನು ವಿರೋಧಿಸಿ ತಕ್ಷಣ ನೀರು ಬಿಡುವುದನ್ನು ನಿಲ್ಲಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.