ನವದೆಹಲಿ : 2018ರಲ್ಲಿ ಚುನಾವಣಾ ನಿಧಿಯ ಕಾರ್ಯವಿಧಾನ ಜಾರಿಯಾದಾಗನಿಂದ ಸ್ವೀಕರಿಸಿದ ಮತ್ತು ಎನ್‌ಕ್ಯಾಶ್ ಮಾಡಿದ ಚುನಾವಣಾ ಬಾಂಡ್‌ಗಳ ವಿವರಗಳನ್ನು ಹಲವು ರಾಜಕೀಯ ಪಕ್ಷಗಳು ಬುಧವಾರ ಚುನಾವಣಾ ಆಯೋಗಕ್ಕೆ (ಇಸಿ) ಸಲ್ಲಿಸಿವೆ ಎಂದು ವರದಿಗಳು ಹೇಳಿವೆ.
ಭಾರತೀಯ ಜನತಾ ಪಕ್ಷ (ಬಿಜೆಪಿ), ಕಾಂಗ್ರೆಸ್ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಚುನಾವಣಾ ಬಾಂಡ್ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿವೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ : ಒಂದೇ ದಿನದಲ್ಲಿ 21,000 ಕ್ಕೂ ಹೆಚ್ಚು ಜನ ಬಿಜೆಪಿ ಸೇರ್ಪಡೆ..!
ನವೆಂಬರ್ 2ರಂದು ಸುಪ್ರೀಂ ಕೋರ್ಟ್‌ನ ಐವರು ನ್ಯಾಯಾಧೀಶರ ಸಂವಿಧಾನ ಪೀಠದ ಆದೇಶದಂತೆ ಎಲ್ಲಾ ರಾಜಕೀಯ ಪಕ್ಷಗಳು ನವೆಂಬರ್ 15 ರಂದು ಸಂಜೆ 5 ಗಂಟೆಯೊಳಗೆ ಚುನಾವಣಾ ಬಾಂಡ್‌ಗಳ ವಿವರಗಳನ್ನು ಸಲ್ಲಿಸುವಂತೆ ಚುನಾವಣಾ ಆಯೋಗ ಸೂಚನೆ ನೀಡಿತ್ತು. ಈ ವಿವರಗಳನ್ನು ನವೆಂಬರ್ 19 ರೊಳಗೆ ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ.
ನವೆಂಬರ್ 3ರಂದು ತನ್ನ ಆದೇಶವನ್ನು ಪುನರುಚ್ಚರಿಸಿದ್ದ ಸುಪ್ರೀಂ ಕೋರ್ಟ್, ಎಲ್ಲಾ ರಾಜಕೀಯ ಪಕ್ಷಗಳು ಪ್ರತಿ ಬಾಂಡ್‌ನ ದಾನಿಗಳ ವಿವರಗಳು, ಬಾಂಡ್‌ನ ಮೊತ್ತ, ಹಣ ಜಮಾ ಮಾಡಿರುವ ಬ್ಯಾಂಕ್ ಖಾತೆ ಮತ್ತು ದಿನಾಂಕ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಸಲ್ಲಿಸಲು ಸೂಚಿಸುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.