ಗುರುರಾಜ್ ಗಂಟಿಹೊಳೆ ಅವರು ಭಾರತೀಯ ರಾಜಕಾರಣಿಯಾಗಿದ್ದು , ಮೇ 2023 ರಿಂದ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ ಸದಸ್ಯರಾಗಿದ್ದಾರೆ, ಇವರು ಕರ್ನಾಟಕ ರಾಜ್ಯದ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗಂಟಿಹೊಳೆಯ ಬಿಜೂರಿನಲ್ಲಿ ಜೂನ್ 10,1981 ರಂದು ಮಹಾಬಲ ಶೆಟ್ಟಿ ಮತ್ತು ಪ್ರೇಮಾ ಶೆಟ್ಟಿ ದಂಪತಿಗೆ ಜನಿಸಿದರು . 2008 ರಲ್ಲಿ ಮೈಸೂರು ಮುಕ್ತ ವಿಶ್ವವಿದ್ಯಾಲಯದಲ್ಲಿ ಸಮೂಹ ಸಂವಹನ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದರು.
ರಾಜಕೀಯ ಜೀವನ
ಸುಮಾರು 10 ವರ್ಷಗಳ ಕಾಲ ರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲಿ ಕೆಲಸ ಮಾಡಿರುವ ಗುರುರಾಜ್ ಗಂಟಿಹೊಳೆ, 2013 ರಿಂದ 2015 ರ ಅವಧಿಯಲ್ಲಿ ಅವರು ಭಾರತೀಯ ಜನತಾ ಪಾರ್ಟಿ , ಉಡುಪಿಯ ಉಪಾಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ . ಬೈಂದೂರು ಕ್ಷೇತ್ರದಿಂದ ಗುರುರಾಜ್ ಗಂಟಿಹೊಳೆ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ .
ಗುರುರಾಜ್ 2023 ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಗೆದ್ದರು .ಮತ್ತು ಪ್ರಸ್ತುತ ಬೈಂದೂರು ಪ್ರದೇಶದ ಕರ್ನಾಟಕ ವಿಧಾನಸಭೆಯ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ, 2023 ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಅಭ್ಯರ್ಥಿ ಕೆ ಗೋಪಾಲ ಪೂಜಾರಿ ಅವರನ್ನು 16,153 ಮತಗಳಿಂದ ಸೋಲಿಸಿದರು.
ಆರ್‌ಎಸ್‌ಎಸ್ ಹಿನ್ನೆಲೆಯ ಗುರುರಾಜ್, ಪ್ರಚಾರಕ್ ಆಗಿ ಪುತ್ತೂರು, ಸುಳ್ಯದಲ್ಲಿ ಕೆಲಸ ಮಾಡಿದ್ದರು. ಈಶಾನ್ಯ ರಾಜ್ಯಗಳಲ್ಲಿ ಮತಾಂತರ, ಉಗ್ರರ ಉಪಟಳ ಹೆಚ್ಚಳವಾದ ಸಂದರ್ಭದಲ್ಲಿ ಮಣಿಪುರದ ಮಕ್ಕಳನ್ನು ಕರೆದು ತಂದು ಅವರಿಗೆ ಶಿಕ್ಷಣ ಕೊಡಿಸಿದ್ದರು. ತಮ್ಮ ಮನೆಯಲ್ಲೇ 50ಕ್ಕೂ ಹೆಚ್ಚು ಈಶಾನ್ಯ ರಾಜ್ಯದ ಮಕ್ಕಳಿಗೆ ಶಿಕ್ಷಣ ನೀಡಿದ್ದಾರೆ. ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.