Wednesday, November 29, 2023
spot_img
- Advertisement -spot_img

ವಿದ್ಯುತ್ ಕಳವು ಆರೋಪ: ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್

ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ವಿದ್ಯುತ್ ಕಳವು ಪ್ರಕರಣದಲ್ಲಿ ಎಫ್‌ಐಆರ್ ದಾಖಲಾಗಿದೆ. ಬೆಸ್ಕಾಂ ಅಧಿಕಾರಿಯೊಬ್ಬರ ದೂರಿನ ಆಧಾರದಲ್ಲಿ ಜಯನಗರ ಬೆಸ್ಕಾಂ ಜಾಗೃತ ದಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಜೆಪಿ ನಗರ ನಿವಾಸಕ್ಕೆ ಹೆಚ್‌ಡಿ ಕುಮಾರಸ್ವಾಮಿ ಅವರು ವಿದ್ಯುತ್ ಅಲಂಕಾರ ಮಾಡಿದ್ದರು. ಇದಕ್ಕೆ ಕಂಬದಿಂದ ನೇರವಾಗಿ ವಿದ್ಯುತ್ ಸಂಪರ್ಕ ಪಡೆದುಕೊಂಡಿದ್ದರು. ಹೀಗೆ ವಿದ್ಯುತ್ ಸಂಪರ್ಕವನ್ನು ಪಡೆದುಕೊಳ್ಳುವುದು ಕಾನೂನು ಬಾಹಿರವಾಗಿದೆ. ಈ ಹಿನ್ನೆಲೆಯಲ್ಲಿ 2003 ರ ವಿದ್ಯುತ್ ಕಾಯ್ದೆಯ ಸೆಕ್ಷನ್ 135 ಅಡಿಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ವಿದ್ಯುತ್ ಕಳ್ಳತನ ಆರೋಪ: ಎಷ್ಟು ದಂಡ ಹಾಕ್ತಾರೋ ಕಟ್ತೀನಿ ಎಂದ ಹೆಚ್‌ಡಿಕೆ

ಈ ಆರೋಪ ಬೆನ್ನಲ್ಲೇ ಕುಮಾರಸ್ವಾಮಿ ಸ್ಪಷ್ಟೀಕರಣ ನೀಡಿದ್ದರು. ಇದು ಅಚಾತುರ್ಯದಿಂದ ಈ ಘಟನೆ ಆಗಿದೆ ಎಂದು ಹೇಳಿದ್ದರು. ಅಲ್ಲದೆ ಈ ವಿಚಾರವನ್ನು ರಾಜಕೀಯವಾಗಿ ಕಾಂಗ್ರೆಸ್ ಬಳಸುತ್ತಿದೆ ಎಂದು ಆರೋಪ ಮಾಡಿದ್ದರು.

ವಿದ್ಯುತ್ ಕಳವು ಆರೋಪದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಬೆಸ್ಕಾಂ ಅಧಿಕಾರಿಗಳು ಭೇಟಿ ನೀಡಿದ್ದರು ಹಾಗೂ ಪರಿಶೀಲನೆ ನಡೆಸಿದ್ದರು. ಬಳಿಕ ಬೆಸ್ಕಾಂ ಅಧಿಕಾರಿಯೊಬ್ಬರು ನೀಡಿದ ದೂರಿನ ಹಿನ್ನೆಲೆಯಲ್ಲಿ ಇದೀಗ ಜಯ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles