Monday, March 20, 2023
spot_img
- Advertisement -spot_img

ಶಾಸಕ ಅರವಿಂದ ಲಿಂಬಾವಳಿ ಸಹಿತ ಎಲ್ಲಾ ಆರೋಪಿಗಳನ್ನು ಬಂಧಿಸಬೇಕು : ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ಉದ್ಯಮಿ ಪ್ರದೀಪ್ ಅವರ ಆತ್ಮಹತ್ಯೆ ದುರದೃಷ್ಟಕರ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬೇಸರಿಸಿದರು. ಪ್ರದೀಪ್ ಮನೆಗೆ ಭೇಟಿ ಬಳಿಕ ಸರಣಿ ಟ್ವೀಟ್ ಮಾಡಿ, ಪ್ರದೀಪ್ ಆತ್ಮಹತ್ಯೆಗೆ ಕಾರಣರಾದ ಶಾಸಕ ಅರವಿಂದ ಲಿಂಬಾವಳಿ ಸಹಿತ ಇತರೆ ಎಲ್ಲಾ ಆರೋಪಿಗಳನ್ನು ಈ ಕೂಡಲೇ ಬಂಧಿಸಬೇಕು ಜೊತೆಗೆ, ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಪೊಲೀಸ್ ಇಲಾಖೆಗೆ ಆದೇಶ ನೀಡಬೇಕು ಎಂದು ಒತ್ತಾಯಿಸುತ್ತೇನೆ ಎಂದು ಒತ್ತಾಯ ಮಾಡಿದ್ದಾರೆ.


ಪ್ರದೀಪ್ ಮನೆಗೆ ಭೇಟಿ ಬಳಿಕ ಸರಣಿ ಟ್ವೀಟ್ ಮಾಡಿ, ಡೆತ್ ನೋಟ್ ನಲ್ಲಿ ಆಡಳಿತದ ಪಕ್ಷದ ಶಾಸಕರ ಹೆಸರಿದೆ ಎಂಬ ಕಾರಣಕ್ಕೆ ಪೊಲೀಸರು ಅಪರಾಧಿಗಳನ್ನು ಬಂಧಿಸದಿದ್ದರೆ ಅವರು ಸಾಕ್ಷ್ಯನಾಶ ಮಾಡುವ ಸಾಧ್ಯತೆಗಳಿರುತ್ತದೆ. ಹೀಗಾದಾಗ ಅನ್ಯಾಯಕ್ಕೊಳಗಾದ ಕುಟುಂಬಕ್ಕೆ ನ್ಯಾಯ ಸಿಗಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.

ದಿವಂಗತ ಪ್ರದೀಪ್ ಅವರು ಉದ್ಯಮವೊಂದಕ್ಕೆ ಸುಮಾರು 1.5 ಕೋಟಿ ರೂಪಾಯಿ ಬಂಡವಾಳ ಹೂಡಿದ್ದರು. ಆದರೆ ಈವರೆಗೆ ನಯಾಪೈಸೆ ಲಾಭದ ಹಣ ಅವರ ಕೈಸೇರಿಲ್ಲ. ಈ ವಿವಾದದಲ್ಲಿ ಶಾಸಕ ಅರವಿಂದ ಲಿಂಬಾವಳಿ ಅವರು ಮಧ್ಯಸ್ಥಿಕೆ ವಹಿಸಿದ್ದು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ.

ತನ್ನ ಪತಿಯ ಸಾವಿಗೆ ನ್ಯಾಯ ಸಿಗಬೇಕು ಮತ್ತು ಸಾಲಮಾಡಿ ಹೂಡಿಕೆ ಮಾಡಿದ್ದ ಹಣವನ್ನು ವಾಪಸ್ ಕೊಡಿಸಬೇಕು ಎಂಬುದು ಮೃತನ ಪತ್ನಿ ನಮಿತಾ ಅವರ ಮನವಿ. ಪೊಲೀಸ್ ಇಲಾಖೆ ತಕ್ಷಣ ಕ್ರಮವಹಿಸಿ, ಈ ಹಣವನ್ನು ವಾಪಸ್ ಕೊಡಿಸುವ ಕೆಲಸ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

Related Articles

- Advertisement -

Latest Articles