Tuesday, November 28, 2023
spot_img
- Advertisement -spot_img

ಕಾಂಗ್ರೆಸ್ ಯೂಸ್ ಆಂಡ್​ ಥ್ರೋ ಪಕ್ಷ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಗೆ ಟಿಕೆಟ್ ಸಿಗುವ ವಿಶ್ವಾಸವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿಯವರು ಕಾಂಗ್ರೆಸ್​ಗೆ ಹೋಗಬಾರದು ಎಂಬುದು ನಮ್ಮ ಅಪೇಕ್ಷೆ, ಲಕ್ಷ್ಮಣ ಸವದಿ ಗೆ ನಮ್ಮ ಪಾರ್ಟಿ ಎಲ್ಲವನ್ನೂ ಸಹ ಕೊಟ್ಟಿದೆ ಎಂದು ತಿಳಿಸಿದರು.

ಕಾಂಗ್ರೆಸ್ ಯೂಸ್ ಆಂಡ್​ ಥ್ರೋ ಪಕ್ಷ. ಬಿಜೆಪಿಯಲ್ಲಿ ಭವಿಷ್ಯ ಇತ್ತು, ದಯವಿಟ್ಟು ಅಲ್ಲಿಗೆ ಹೋಗಬೇಡಿ. ಬಿಜೆಪಿಯಲ್ಲಿ ಹೆಚ್ಚಿನ ಆಕಾಂಕ್ಷಿಗಳಿರುವುದರಿಂದ ಗೊಂದಲ ಆಗಿದೆ. ಯಾವ ಪಾರ್ಟಿ ಗೆಲ್ಲುತ್ತೆ, ಆ ಪಕ್ಷದಲ್ಲಿ ಆಕಾಂಕ್ಷಿಗಳು ಹೆಚ್ಚಿರುತ್ತಾರೆ. 90 ಪರ್ಸೆಂಟ್ ಇಂದು ಅಥವಾ ನಾಳೆ ಸಮಸ್ಯೆ ಬಗೆಹರಿಯುತ್ತೆ ಎಂದು ಹೇಳಿದರು.

ರಾಷ್ಟ್ರೀಯ ಅಧ್ಯಕ್ಷರಿಗೆ ನಮ್ಮ ಅಭಿಪ್ರಾಯ ಹೇಳಿದ್ದೇವೆ. ಎಲ್ಲವೂ ಸುಲಲಿತವಾಗಿ ಪರಿಹಾರವಾಗುತ್ತೆ, ಕಾಂಗ್ರೆಸ್ ಪಕ್ಷದವರಂತೆ ಅಪ್ಪ-ಮಕ್ಕಳಿಗೆ ಟಿಕೆಟ್ ಕೊಡಲ್ಲ, ಬಿಜೆಪಿಯಲ್ಲಿ ಟಿಕೆಟ್ ಸಿಗದ್ದಕ್ಕೆ ಹಲವು ನಾಯಕರು ರಾಜೀನಾಮೆ ನೀಡಿದ್ದು, ಬಿಜೆಪಿ ಹೊಸಬರಿಗೆ ಮಣೆ ಹಾಕಿದೆ.

Related Articles

- Advertisement -spot_img

Latest Articles