ಚೆನ್ನೈ: ಪ್ರಧಾನಿ ನರೇಂದ್ರ ಮೋದಿಯವರ ಕಿರಿಯ ಸಹೋದರ ಪ್ರಹ್ಲಾದ್ ಮೋದಿಯವರನ್ನು ಚೆನ್ನೈನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿಯವರ ಕಿರಿಯ ಸಹೋದರ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು, ಇಲ್ಲಿನ ಅಯನಂಬಾಕ್ಕಂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಚಿಕಿತ್ಸೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ. ಮೂಲಗಳ ಪ್ರಕಾರ ಪ್ರಹ್ಲಾದ್ ಮೋದಿ ಭಾರತದಲ್ಲಿ ಆಧ್ಯಾತ್ಮಿಕ ಕ್ಷೇತ್ರಗಳ ಪ್ರವಾಸದಲ್ಲಿದ್ದರು. ಅವರು ತಮ್ಮ ಕುಟುಂಬದೊಂದಿಗೆ ಕನ್ಯಾಕುಮಾರಿ, ಮಧುರೈ, ರಾಮೇಶ್ವರಂನಲ್ಲಿರುವ ದೇವಾಲಯಗಳಿಗೆ ಭೇಟಿ ನೀಡುತ್ತಿದ್ದರು.
ಕಳೆದ ವರ್ಷ ಮೈಸೂರಿನಲ್ಲಿ ಪ್ರಧಾನಿ ಮೋದಿ ಅವರ ಸಹೋದರ ಮತ್ತು ಕುಟುಂಬ ಸದಸ್ಯರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿ ಗಾಯಗೊಂಡಿದ್ದರು. ಪ್ರಹ್ಲಾದ್ ಮೋದಿ ಪತ್ನಿ, ಮಗ, ಸೊಸೆ ಮತ್ತು ಮೊಮ್ಮಗನೊಂದಿಗೆ ಬಂಡೀಪುರಕ್ಕೆ ಪ್ರಯಾಣಿಸುತ್ತಿದ್ದಾಗ ಅವರ ಮರ್ಸಿಡಿಸ್ ಬೆಂಜ್ ಎಸ್‌ಯುವಿ ಡಿವೈಡರ್‌ಗೆ ಡಿಕ್ಕಿ ಹೊಡೆದಿತ್ತು.
ಪ್ರಹ್ಲಾದ್ ಮೋದಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.ಸಂಘಟನೆಯ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಣ್ಣ ಮೋದಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದರು.