Friday, March 24, 2023
spot_img
- Advertisement -spot_img

ವಿರೋಧ ಪಕ್ಷದ ನಾಯಕರ ಮಾತಿಗೆ ಏನೂ ಉತ್ತರಿಸೋದಿಲ್ಲ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮೈಸೂರು: ವಿರೋಧ ಪಕ್ಷದ ನಾಯಕರು ಅಸಂಬದ್ಧವಾಗಿ ಮಾತನಾಡಿದ್ದಾರೆ, ಆದರೆ ನಾನು ಅವರ ಬಗ್ಗೆ ಏನೂ ಮಾತನಾಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸುತ್ತೂರಿನ ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ‌ ಮಹೋತ್ಸವದಲ್ಲಿ ಭಜನಾ ಮೇಳದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ನನಗೆ ಹೊಗಳಿಕೆ ಅಂದ್ರೆ ಭಯ, ತೆಗಳಿಕೆಯನ್ನು ಮೆಟ್ಟಿಲು ಮಾಡಿಕೊಂಡು ಹೋಗೋದು ನನಗೆ ಗೊತ್ತಿದೆ ಎಂದರು.

ವಿರೋಧ ಪಕ್ಷದ ನಾಯಕರ ಮಾತುಗಳು ದೊಡ್ಡವರ ಸಣ್ಣತನವನ್ನು ತೋರಿಸುತ್ತದೆ. ಸ್ಥಾನದಿಂದ ಗೌರವ ಬರುವುದು ಬೇರೆ ಆ ಸ್ಥಾನದ ಗೌರವ ನಾವು ಉಳಿಸಿಕೊಂಡು ಹೋಗಬೇಕು. ಮುಂದಿನ ಪೀಳಿಗೆಗೆ ಏನು ಉಳಿಸಿಕೊಂಡು ಹೋಗಬೇಕು ಎಂಬುದು ಗೊತ್ತಾಗಬೇಕು ಎಂದು ಹೇಳಿದರು.

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಮಾತನಾಡಿ, ನಮ್ಮ ದೇಶದಲ್ಲಿ ಕೆಲವರು ಎಡಬಿಡಂಗಿಗಳಿದ್ದಾರೆ. ಅವರಿಗೆ ನಾವು ಏನೇ ಮಾಡಿದರು ಅದು ತಪ್ಪು. ಕೇವಲ ತಪ್ಪು ಹುಡುಕುವುದೇ ಅವರ ಕೆಲಸ. ಕೋವಿಡ್ ಸಮಯದಲ್ಲಿ ಜನರು ಸರ್ಕಾರದ ಬಗ್ಗೆ ಬೇಸರ ಪಟ್ಟುಕೊಳ್ಳಲಿಲ್ಲ ಪರಿಸ್ಥಿತಿಯ ಬಗ್ಗೆ ಬೇಸರ ವ್ಯಕ್ತಪಡಿಸಿದರು.

Related Articles

- Advertisement -

Latest Articles