ಗದಗ: ಕಾಂಗ್ರೆಸ್ ಪಕ್ಷದಿಂದ ಇಂದು ಪ್ರಜಾಧ್ವನಿ ಬೃಹತ್ ಸಮಾವೇಶ ನಡೆಯಲಿದ್ದು, ಕಾಂಗ್ರೆಸ್ ಕಾರ್ಯಕರ್ತರು ಸೇರಿ ಸುಮಾರು 40 ಸಾವಿರ ಜನರು ಈ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ ಎಂದು ಶಾಸಕ ಎಚ್ ಕೆ ಪಾಟೀಲ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಇಂದು 4 ಘಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಕೆಪಿಸಿಸಿ ಕಚೇರಿಯಿಂದ ಆರಂಭವಾದ ಈ ಯಾತ್ರೆ ಇಂದು ಗದಗಕ್ಕೆ ಬಂದಿದೆ. ಕಾಂಗ್ರೆಸ್ ಪ್ರಜಾಧ್ವನಿ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ದ ಕಿಡಿಕಾರಿದ್ದರು. ಗಾಂಧೀಜಿಯವರು ಬ್ರಿಟಿಷರಿಗೆ ಭಾರತ ಬಿಟ್ಟು ತೊಲಗಿ ಎಂದು ಹೇಳಿದ ಸ್ಥಳದಿಂದ ನಾವು ಯಾತ್ರೆ ಆರಂಭ ಮಾಡಿದ್ದೇವೆ.
ಗಾಂಧಿಯವರು ಬ್ರಿಟಿಷರನ್ನ ಭಾರತ ಬಿಟ್ಟು ತೊಲಗಿ ಎಂದಿದ್ದರು, ನಾವು ಬಿಜೆಪಿಯವರನ್ನ ರಾಜ್ಯದಿಂದ ಒದ್ದೋಡಿಸಿ ಎನ್ನುವ ಕರೆ ನೀಡಿದ್ದೇವೆ. ಬಿಜೆಪಿ ಸರ್ಕಾರದ ಭ್ರಷ್ಟಾಚಾರವನ್ನ ಜನರ ಮುಂದಿಡಲು ಸಜ್ಜಾಗಿದ್ದಾರೆ. ಬಿಜೆಪಿಯವರು ಜನರ ಭಾವನೆಗಳ ಬಗ್ಗೆ ಚೆಲ್ಲಾಟ ಆಡುತ್ತಿದ್ದಾರೆ ಎನ್ನುವ ಮೂಲಕ ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಬಿಜೆಪಿ ವಿರುದ್ಧ ಕಿಡಿಕಾರಿದ್ದರು.
ಇನ್ನು ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಕರ್ನಾಟಕ ಉಸ್ತುವಾರಿ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿಧ್ದರಾಮಯ್ಯ, ಎಂ ಬಿ ಪಾಟೀಲ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ ಎಸ್ ಪಾಟೀಲ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು, ಮುಖಂಡರು ಭಾಗಿಯಾಗಲಿದ್ದಾರೆ.