Thursday, September 28, 2023
spot_img
- Advertisement -spot_img

BREAKING: ಪ್ರಜ್ವಲ್ ರೇವಣ್ಣಗೆ ಬಿಗ್ ರಿಲೀಫ್! ಅನರ್ಹತೆ ಆದೇಶಕ್ಕೆ ʼಸುಪ್ರೀಂʼ ತಡೆ

ನವದೆಹಲಿ: ಹಾಸನ ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದ ಜೆಡಿಎಸ್‌ ನಾಯಕ ಪ್ರಜ್ವಲ್‌ ರೇವಣ್ಣ ಅವರಿಗೆ ಸುಪ್ರೀಂಕೋರ್ಟ್‌ ಬಿಗ್‌ ರಿಲೀಫ್‌ ನೀಡಿದೆ. ಕರ್ನಾಟಕ ಹೈಕೋರ್ಟ್‌ ನೀಡಿದ್ದ ಅನರ್ಹತೆ ಆದೇಶಕ್ಕೆ ಸುಪ್ರೀಂಕೋರ್ಟ್‌ 4 ವಾರಗಳವರೆಗೆ ತಾತ್ಕಾಲಿಕ ತಡೆಯನ್ನು ನೀಡಿದೆ.

ಧನಂಜಯ್ ಚಂದ್ರಚೂಡ್, ಪರಡಿವಾಲಾ, ಮನೋಜ್ ಮಿಶ್ರಾ ಮೂವರು ನ್ಯಾಯಾಧೀಶರಿದ್ದ ಪೀಠದಿಂದ ತಡೆಯಾಜ್ಞೆ ಆದೇಶ ಹೊರಡಿಸಲಾಗಿದ್ದು, ಸದ್ಯ ಅನರ್ಹತೆಯಿಂದ ಪ್ರಜ್ವಲ್ ಪಾರಾಗಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರಜ್ವಲ್‌ ಸ್ಪರ್ಧೆಗೆ ಅವಕಾಶ ಲಭಿಸಿದೆ.

ಏನಿದು ಪ್ರಕರಣ?: ಚುನಾವಣಾ ಪ್ರಮಾಣಪತ್ರದಲ್ಲಿ ಸುಳ್ಳು ಮಾಹಿತಿ ಸಲ್ಲಿಸಿರುವ ಆರೋಪದಡಿ ಜೆಡಿಎಸ್‌ನ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ, ಹೈಕೋರ್ಟ್‌ ಆದೇಶಿಸಿತ್ತು.

ವಕೀಲ ಹಾಗೂ ಕೆಡಿಪಿ ಮಾಜಿ ಸದಸ್ಯ ಜಿ.ದೇವರಾಜೇಗೌಡ ಹಾಗೂ ಎ.ಮಂಜು ಎಂಬುವರು ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ ವೇಳೆ ತಮ್ಮ ಆಸ್ತಿ ವಿವರವನ್ನು ಮುಚ್ಚಿಟ್ಟು ಸುಳ್ಳು ಪ್ರಮಾಣ ಪತ್ರವನ್ನು ಸಲ್ಲಿಸಿದ್ದಾರೆ ಎಂದು ಆರೋಪಿಸಿ ಏ.26, 2019ರಲ್ಲಿ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು.

ಇದನ್ನೂ ಓದಿ: ಪ್ರಜ್ವಲ್‌ ರೇವಣ್ಣ ಅನರ್ಹ; ವಿಚಾರಣೆ ಮುಂದೂಡಿದ ಹೈಕೋರ್ಟ್‌

ಈ ಪ್ರಕರಣದ ಕುರಿತು ಸುದೀರ್ಘ ವಿಚಾರಣೆ ಮಾಡಿದ್ದ ಕರ್ನಾಟಕ ಹೈಕೋರ್ಟ್‌ ಸೆಪ್ಟಂಬರ್‌ 1ರಂದು ಪ್ರಜ್ವಲ್‌ ರೇವಣ್ಣ ಅವರನ್ನು ಹಾಸನ ಸಂಸದ ಸ್ಥಾನದಿಂದ ಅಸಿಂಧುಗೊಳಿಸಿ ಆದೇಶ ಹೊರಡಿಸಿತ್ತು. ಬಳಿಕ ಅಮಾನತು ಆದೇಶಕ್ಕೆ ತಾತ್ಕಾಲಿಕ ತಡೆ ನೀಡುವಂತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದರೂ, ಅದನ್ನು ನ್ಯಾಯಾಲಯ ತಿರಸ್ಕರಿಸಿತ್ತು. ಇದರ ಜೊತೆಗೆ ಪ್ರಜ್ವಲ್‌ ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದರು.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles