ಬೆಂಗಳೂರು: ಚುನಾವಣೆ ಪ್ರಮಾಣ ಪತ್ರದಲ್ಲಿ ತಪ್ಪು ಮಾಹಿತಿ ನೀಡಿದ ಆರೋಪದಲ್ಲಿ ರಾಜ್ಯ ಹೈಕೋರ್ಟ್‌ನಿಂದ ಅನರ್ಹತೆಗೆ ಒಳಗಾಗಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸುಪ್ರೀಕೋರ್ಟ್ ಸೋಮವಾರ ರಿಲೀಫ್ ನೀಡಿತ್ತು. ಅನರ್ಹತೆಗೆ ತಡೆ ನೀಡಿದ ಬೆನ್ನಲ್ಲೇ ದೆಹಲಿಗೆ ತೆರಳಿದ ಅವರು, ನೂತನ ಸಂಸತ್ ಭವನದಲ್ಲಿ ನಡೆಯುವ ವಿಶೇಷ ಅಧಿವೇಶನದಲ್ಲಿ ಭಾಗಿಯಾಗಲಿದ್ದಾರೆ.
ಪ್ರಜ್ವಲ್ ರೇವಣ್ಣ ಸಂಸದ ಸ್ಥಾನವನ್ನು ಅನರ್ಹಗೊಳಿಸಿದ್ದ ರಾಜ್ಯ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿತ್ತು. ತೀರ್ಪು ಹೊರಬೀಳುತ್ತಲೇ ದೆಹಲಿಗೆ ತೆರಳಿರುವ ಪ್ರಜ್ವಲ್, ಇಂದಿನಿಂದ ಆರಂಭವಾಗುವ ವಿಶೇಷ ಅಧಿವೇಶನದಲ್ಲಿ ಪಾಲ್ಗೊಳ್ಳಲಿದ್ದಾರೆ. ವಿಶೇಷ ಅಧಿವೇಶನದಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಿರುವ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಸಂಸದ ಪ್ರಜ್ವಲ್‌ಗೆ ಕರೆ ಮಾಡಿ ದೆಹಲಿಗೆ ಬರುವಂತೆ ಹೇಳಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ; ಪ್ರಾಧಿಕಾರದ ಆದೇಶಕ್ಕೆ ಮಣಿದ ರಾಜ್ಯ ಸರ್ಕಾರ; ರಾತ್ರೋರಾತ್ರಿ ತಮಿಳುನಾಡಿಗೆ ನೀರು!
2019ರಲ್ಲಿ ಹಾಸನ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎ. ಮಂಜು ದೂರು ದಾಖಲಿಸಿದ್ದರು. ಪ್ರಸ್ತುತ ಅವರು ಬಿಜೆಪಿ ತೊರೆದು ಜೆಡಿಎಸ್ ಸೇರಿ ಅರಕಲಗೂಡು ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಹೈಕೋರ್ಟ್ ನೀಡಿದ್ದ ತೀರ್ಪಿಗೆ ಸುಪ್ರೀಂಕೋರ್ಟ್ ನೀಡಿರುವ ತಡೆಯಾಜ್ಞೆಯಿಂದ ಪ್ರಜ್ವಲ್ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕದ್ದು, ವಿಶೇಷ ಅಧೀವೇಷನಕ್ಕೂ ಮೊದಲೇ ಅವರ ಪರವಾಗಿ ತೀರ್ಪು ಬಂದಿದೆ.
ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡುತ್ತಿದ್ದಂತೆಯೇ ಪ್ರಜ್ವಲ್ ರೇವಣ್ಣ ಅವರಿಗೆ ಕರೆ ಮಾಡಿದ ಹೆಚ್ ಡಿ ದೇವೇಗೌಡರು, ದೆಹಲಿಗೆ ಬಂದು ಸಂಸತ್ ಕಲಾಪಕ್ಕೆ ಹಾಜರಾಗುವಂತೆ ಸೂಚಿಸಿದ್ದಾರೆ. ಅದರಂತೆ ಪ್ರಜ್ವಲ್ ಇಂದಿನ ಹೊಸ ಸಂಸತ್ ಭವನದಲ್ಲಿ ಆರಂಭವಾಗಲಿರುವ ವಿಶೇಷ ಅಧಿವೇಶನದಲ್ಲಿ ಭಾಗಿಯಾಗಲಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.