ಬೆಂಗಳೂರು: “ಇದು ಭ್ರಷ್ಟಾಚಾರಿಗಳು, ರಾಷ್ಟ್ರ ವಿರೋಧಿಗಳು ಗುಹೆಯೊಳಗೆ ಅಡಗಿ ಕುಳಿತು ಕೊಳ್ಳುವ ಸಮಯ, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಾಡು – ನಾಡಿನ ಜನ, ಕಾಡು-ಕಾಡಿನ ವನ್ಯಜೀವಿ ಎಲ್ಲರೂ ಸುರಕ್ಷಿತವಾಗಿದ್ದಾರೆ” ಎಂದು ಪ್ರಲ್ಹಾದ್ ಜೋಶಿ ಟ್ವೀಟ್ ಮಾಡಿದ್ದಾರೆ.
ಪ್ರಧಾನಿ ಮೋದಿ ಬಂಡೀಪುರಕ್ಕೆ ಭೇಟಿ ನೀಡಿದ್ದಾಗ ಮಾಜಿ ಸಿಎಂ ಸಿದ್ದರಾಮಯ್ಯ ಹುಲಿ ಕಾಣಸಿಗದ್ದಕ್ಕೆ ವ್ಯಂಗ್ಯವಾಡಿ ಟ್ವೀಟ್ ಮಾಡಿದ್ದರು.
ದುರ್ಬಿನ್ , ಕ್ಯಾಮೆರಾ ಹಿಡಿದು ಸುತ್ತಾಡಿದರೂ ಮೋದಿ ಕಣ್ಣಿಗೆ ಒಂದೂ ಹುಲಿ ಕಾಣಿಸಿಲ್ಲ ಎನ್ನಲಾಗುತ್ತಿದೆ. ಇದನ್ನೇ ಮುಂದಿಟ್ಟುಕೊಂಡು ಟ್ವೀಟ್ ಮಾಡಿದ್ದ ಸಿದ್ದರಾಮಯ್ಯ ಅವರು, “ಹಿಡಿದು ಮಾರಿಬಿಡುತ್ತಾರೆ ಅನ್ನುವ ಭಯಕ್ಕೆ ಯಾವ ಗುಹೆಯೊಳಗೆ ಅಡಗಿ ಕೂತಿದೆಯೋ.. ಅಯ್ಯೋ ಪಾಪ….!! ಇನ್ನು ಕೆಲವೇ ದಿನಗಳಲ್ಲಿ ಬಂಡಿಪುರ ಉಳಿಸಿ ಎಂಬ ಅಭಿಯಾನವನ್ನು ಕನ್ನಡಿಗರು ಶುರು ಮಾಡುವಂತೆ ಆಗದಿರಲಿ.. ಅದೇ ನೀವು ಕರುನಾಡಿಗೆ ಮಾಡುವ ದೊಡ್ಡ ಉಪಕಾರ ನರೇಂದ್ರ ಮೋದಿಜೀ” ಎಂದು ಹೇಳಿದ್ದರು.
ನರೇಂದ್ರ ಮೋದಿ ಖಾಕಿ ಬಣ್ಣದ ಪ್ಯಾಂಟ್, ಕಪ್ಪು ಬಣ್ಣದ ಹ್ಯಾಟ್, ಗಾಗಲ್ಸ್, ಟೀ ಶರ್ಟ್ ಹಾಗೂ ಅರಣ್ಯ ಇಲಾಖೆ ಜಾಕೆಟ್ ಧರಿಸಿ ಬಂಡೀಪುರ ಅರಣ್ಯಕ್ಕೆ ಎಂಟ್ರಿ ಕೊಟ್ಟಿದ್ದು, ನರೇಂದ್ರ ಮೋದಿಯವರು ಹಿರೋನಂತೆ ಕಾಣ್ತಿದ್ದಾರೆ ಎಂದು ಸೋಶೀಯಲ್ ಮೀಡಿಯಾದಲ್ಲಿ ಹಲವರು ಕಾಮೆಂಟ್ ಮಾಡಿದ್ದರು.