Thursday, June 8, 2023
spot_img
- Advertisement -spot_img

ಸುನೀಲ್ ಕುಮಾರ್ ವಿರುದ್ದ ಮಾನಹಾನಿ ದೂರು ಸಲ್ಲಿಸಿದ ಪ್ರಮೋದ್ ಮುತಾಲಿಕ್

ಉಡುಪಿ: ಕಾರ್ಕಳ ಶಾಸಕ ಸುನೀಲ್ ಕುಮಾರ್ ಶ್ರೀರಾಮ ಸೇನೆ ಸ್ಥಾಪಕ ಪ್ರಮೋದ್ ಮುತಾಲಿಕ್ ಮಾನಹಾನಿ ದೂರು ದಾಖಲಿಸಿದ್ದಾರೆ.

ಇತ್ತೀಚೆಗೆ ಸುನೀಲ್ ಕುಮಾರ್ ಬಿಜೆಪಿ ವಿಜಯೋತ್ಸವ ಸಮಾರಂಭದಲ್ಲಿ ಸುನೀಲ್ ಕುಮಾರ್, ಪ್ರಮೋದ್ ಮುತಾಲಿಕ್ ಒಬ್ಬ ಡೀಲ್ ಮಾಸ್ಟರ್, ಹಣ ಪಡೆದು ಸ್ಪರ್ಧೆ ಮಾಡುತ್ತಾರೆ ಎಂದು ಆರೋಪ ಮಾಡಿದ್ದರು. ಇದೇ ಹೇಳಿಕೆ ವಿರುದ್ಧ ಪ್ರಮೋದ್ ಮುತಾಲಿಕ್ ಕಾರ್ಕಳ ನಗರದ ಠಾಣೆಗೆ ತೆರಳಿ ಶಾಸಕ ಸುನೀಲ್ ಕುಮಾರ್​​ ವಿರುದ್ಧ ದೂರು ದಾಖಲಿಸಿದ್ದಾರೆ.

ನನ್ನನ್ನು ಡೀಲ್ ಮಾಸ್ಟರ್ ಎಂದು ಕರೆದಿದ್ದೀರಿ. ಹಣ ಗಳಿಸುವ ಉದ್ದೇಶ ಇದ್ದಿದ್ದರೇ ಧಾರವಾಡದಿಂದ ಕಾರ್ಕಳಕ್ಕೆ ಬರಬೇಕಾಗಿರಲಿಲ್ಲ. 48 ವರ್ಷ ಹೋರಾಟ ಮಾಡಬೇಕಾಗಿ ಇರಲಿಲ್ಲ. ನಾನು ಮಾಡಿರುವ ಭ್ರಷ್ಟಾಚಾರ ಆರೋಪಗಳಿಗೆ ಯಾವುದೇ ಉತ್ತರ ನೀಡಿಲ್ಲ, ಸುನಿಲ್ ಕುಮಾರ್ ನಾಲಿಗೆ ಬಿಗಿ ಹಿಡಿದು ಮಾತಾಡಬೇಕು ಎಂದು ಕಿಡಿಕಾರಿದ್ದಾರೆ.

ಕನ್ನಡಿ ಮುಂದೆ ನಿಂತು ಸುನಿಲ್ ಕುಮಾರ್ ಅವಲೋಕನ ಮಾಡಿಕೊಳ್ಳಬೇಕು. ಕಾರ್ಕಳದ ಮಾರಿಗುಡಿಗೆ ಹೋಗಿ ತೆಂಗಿನಕಾಯಿ ಇಟ್ಟು ಪ್ರಮಾಣ ಮಾಡಿ ಬಂದಿದ್ದೇನೆ. ಭ್ರಷ್ಟತೆ, ವಂಚನೆ, ಮೋಸದಿಂದ ಗೆದ್ದಿದ್ದೀರಿ ನಿಮಗೆ ಅಭಿನಂದನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

Related Articles

- Advertisement -spot_img

Latest Articles