Wednesday, March 22, 2023
spot_img
- Advertisement -spot_img

ಕಾರ್ಕಳ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಹಾಕದಂತೆ ಮುಖಂಡರ ಒತ್ತಾಯ

ರಾಯಚೂರು: ರಾಯಚೂರು ನಗರದ ಶ್ರೀರಾಮಸೇನೆ ಮುಖಂಡರು, ಕಾರ್ಯಕರ್ತರು ಕಾರ್ಕಳ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಹಾಕದಂತೆ ಬಿಜೆಪಿಗೆ ಒತ್ತಾಯ ಮಾಡಿದ್ದಾರೆ.

ಶ್ರೀರಾಮಸೇನೆಯಿಂದ ಪ್ರಮೋದ್ ಮುತಾಲಿಕ್ ಉಡುಪಿಯ ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದಾರೆ.ಕೋಟಿ ಕೋಟಿ ಖರ್ಚು ಮಾಡಿ ಚುನಾವಣೆ ಎದುರಿಸುವ ಸ್ಥಿತಿಯಲ್ಲಿ ಶ್ರೀರಾಮಸೇನೆ ಇಲ್ಲ. ಕಾರ್ಯಕರ್ತರೇ ಮುತಾಲಿಕ್ ಬೆನ್ನಿಗೆ ನಿಲ್ಲುವಂತೆ ಒತ್ತಾಯಿಸುತ್ತಿದ್ದಾರೆ.

ಇಂಧನ ಸಚಿವ ಸುನಿಲ್ ಕುಮಾರ್ ಕಾರ್ಕಳದ ಹಾಲಿ ಬಿಜೆಪಿ ಶಾಸಕರಾಗಿದ್ದಾರೆ. ಈ ಮಧ್ಯೆಯೂ ಬಿಜೆಪಿ ಅಭ್ಯರ್ಥಿ ಹಾಕದಂತೆ ಬಿಜೆಪಿ ಮುಖಂಡರಿಗೆ ಒತ್ತಾಯಿಸಿದ್ದಾರೆ. ಕಾರ್ಯಕರ್ತರೇ ಗೆಲ್ಲಿಸುತ್ತೇವೆ ಅಂತ ಕರೆ ನೀಡಿರುವ ಹಿನ್ನೆಲೆ ಕಾರ್ಕಳದಲ್ಲಿ ಮುತಾಲಿಕ್ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆಗೆ ಮುಂದಾಗಿದ್ದಾರೆ.

ಒಂದು ವೇಳೆ ಬಿಜೆಪಿ ಟಿಕೆಟ್ ಕೊಟ್ಟರೂ ಸ್ವಾಗತ, ಬಿಜೆಪಿ ಹಾಗೂ ಮುತಾಲಿಕ್ ಸಿದ್ಧಾಂತಗಳು ಒಂದೇ ಆಗಿವೆ. ಈ ಬಗ್ಗೆ ಬಿಜೆಪಿ ನಾಯಕರಿಗೆ ಒತ್ತಾಯಿಸಲಾಗುತ್ತಿದೆ ಅಂತ ಶ್ರೀರಾಮ ಸೇನೆ ಮುಖಂಡರು ಹೇಳಿದ್ದಾರೆ. ಬಿಜೆಪಿ ಅಭ್ಯರ್ಥಿ ಹಾಕದೇ ಇದ್ದರೆ ಮುತಾಲಿಕ್‍ಗೆ ಗೆಲುವು ಖಚಿತ, ಹೀಗಾಗಿ ಕಾರ್ಕಳದಲ್ಲಿ ಬಿಜೆಪಿ ಅಭ್ಯರ್ಥಿ ಹಾಕಬಾರದು ಅಂತ ಒತ್ತಾಯಿಸಿದ್ದಾರೆ.

ಮುಂದಿನ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳದಲ್ಲಿ ಪಕ್ಷೇತರವಾಗಿ ಸ್ಪರ್ಧೆ ಮಾಡುತ್ತಿದ್ದಾರೆ. ಹೀಗಾಗಿ ಬಿಜೆಪಿ ಕಾರ್ಕಳದಲ್ಲಿ ಅಭ್ಯರ್ಥಿ ಹಾಕಬಾರದು ಉಳಿದ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿ ಹಾಕಲಿ, ಆದರೆ ಹಿಂದುತ್ವದ ಸಲುವಾಗಿ ಕಾರ್ಕಳ ಕ್ಷೇತ್ರ ಬಿಟ್ಟು ಕೊಡಬೇಕು. ಹಿಂದುತ್ವದ ಧ್ವನಿಯಾಗಿ ವಿಧಾನಸಭೆ ಪ್ರವೇಶಿಸಲು ಪ್ರಮೋದ್ ಮುತಾಲಿಕ್ ಪ್ರಯತ್ನಿಸುತ್ತಿದ್ದಾರೆ. ಹೀಗಾಗಿ ಅಭ್ಯರ್ಥಿ ಹಾಕದೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.

Related Articles

- Advertisement -

Latest Articles