ಉಡುಪಿ: ನನ್ನನ್ನು ಅಸಾಮಿ, ಗಿರಾಕಿ ಅಂತಾ ಹೇಳಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಕೆಟ್ಟದಾಗಿ ಮಾತನಾಡಲು ನನಗೂ ಬರುತ್ತದೆ. ಆದರೆ ತಂದೆ ತಾಯಿ ನನಗೆ ಸಂಸ್ಕಾರ ಸೌಜನ್ಯತೆ ಕಲಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಮೋದ್ ಮಧ್ವರಾಜ್ ವಾಗ್ದಾಳಿ ನಡೆಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿ, ನನ್ನ ಮೇಲೆ ಇಷ್ಟು ಕೆಟ್ಟದಾಗಿ ಮಾತಾಡುವವರು, ಇನ್ನು ಜನಸಾಮಾನ್ಯರ ಮೇಲೆ ಹೇಗೆ ವರ್ತಿಸಬೇಡ? ಸಿದ್ದರಾಮಯ್ಯ ಈವರೆಗೆ ಏಳು ಬಾರಿ ಪಕ್ಷ ಬದಲಾಯಿಸಿದ್ದಾರೆ. ನಾನು ಸಿದ್ದರಾಮಯ್ಯ ಕ್ಯಾಬಿನೆಟ್ ನಲ್ಲಿ ಮಂತ್ರಿಯಾಗಿದ್ದೆ, ಕಾಂಗ್ರೆಸ್ ಪಕ್ಷದ ಒಳಜಗಳ, ಭ್ರಷ್ಟಾಚಾರಕ್ಕೆ ಬೇಸತ್ತು ಬಿಜೆಪಿಗೆ ಬಂದಿದ್ದೇನೆ ಎಂದು ತಿಳಿಸಿದ್ದಾರೆ.
ಮೋದಿಯನ್ನು ಹೊಗಳದೆ ಈ ದೇಶದಲ್ಲಿ ಇನ್ಯಾರನ್ನು ಹೊಗಳಲಿ? ಇಡೀ ದೇಶ ಹೊಗಳುವಾಗ ನಾನು ಹೊಗಳದೆ ಇರುವುದು ಮೂರ್ಖತನ. ಕಾಂಗ್ರೆಸ್ ಇದೇ ರೀತಿ ಮೋದಿಯನ್ನು ಟೀಕಿಸುತ್ತಿದ್ದರೆ ಸಿಗುವ ನಾಲ್ಕು ಓಟು ಸಿಗಲ್ಲ. ಸಿದ್ದರಾಮಯ್ಯ ಡಿಕೆಶಿಗೆ ಪುಕ್ಸಟ್ಟೆ ಸಲಹೆ ಕೊಡುತ್ತೇನೆ ಎಂದರು.
ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂಬ ಭ್ರಮೆಯಲ್ಲಿದೆ. ಪ್ರಧಾನಿ ಮೋದಿ ಅಮಿತ್ ಶಾ ರಾಜ್ಯ ಪ್ರವಾಸ ಶುರುಮಾಡಿದ್ದಾರೆ. ರಾಜ್ಯದಲ್ಲಿ ರಿಪೇರಿ ಶುರುವಾದಾಗ ಎಲ್ಲಾ ಗೊಂದಲ ಸರಿಯಾಗುತ್ತದೆ ಕಾದು ನೋಡಿ ಎಂದರು.