ಮೈಸೂರು: ಉಡುಪಿ ಜಿಲ್ಲೆ ಕಾರ್ಕಳ ವಿಧಾನಸಭೆ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದು, ಕಾರ್ಕಳ ಕ್ಷೇತ್ರದಲ್ಲಿ ನನಗೆ ನಿಶ್ಚಿತವಾಗಿಯೂ ಗೆಲುವು ಸಿಗಲಿದೆ ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದರು.
ಮಾಧ್ಯಮದವರೊಂದಿಗೆ ಮಾತನಾಡಿ, ಹಿಂದುತ್ವದ ರಕ್ಷಣೆ, ಭ್ರಷ್ಟಾಚಾರದ ವಿರುದ್ಧ ಹೋರಾಡಲು ಕಣಕ್ಕಿಳಿದಿದ್ದೇನೆ, ನನ್ನ ಬಳಿ ಹಣವಿಲ್ಲ, ನಾನು ಭಿಕ್ಷೆ ಬೇಡುತ್ತಿದ್ದೇನೆ ಎಂದರು.
ಶಿಷ್ಟರ ರಕ್ಷಣೆಯಾಗಲಿ, ದುಷ್ಟರಿಗೆ ಶಿಕ್ಷೆಯಾಗಲಿ ಎಂದು ಬೇಡಿಕೊಳ್ಳಲು ಚಾಮುಂಡಿತಾಯಿ ಬಳಿಗೆ ಬಂದಿದ್ದೆ ಎಂದು ಮೈಸೂರು ಭೇಟಿ ಬಗ್ಗೆ ತಿಳಿಸಿದರು. ನನಗೆ ಸ್ವಂತ ಮನೆಯಿಲ್ಲ, ಬ್ಯಾಂಕ್ ಅಕೌಂಟ್ ಇಲ್ಲ. ನನ್ನ ಬಳಿ ಒಂದಷ್ಟು ಬಟ್ಟೆಗಳಿವೆ ಅಷ್ಟೇ. ಹೆಂಡತಿ ಮಕ್ಕಳು ಯಾರು ಇಲ್ಲ. ನನಗೆ ಹಣ ಆಸ್ತಿ ಮಾಡುವ ಉದ್ದೇಶವಿಲ್ಲ, ನಾನು ಹೋದಲ್ಲೆಲ್ಲ ಜನರು ನೋಟು ಕೊಡುತ್ತಿದ್ದು, ವೋಟ್ ಹಾಕ್ತೇವೆ ಎಂದು ಹೇಳಿದ್ದಾರೆ. ನಾನು ಈಗ ಪಕ್ಷೇತರವಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದೇನೆ ಎಂದು ತಿಳಿಸಿದರು.
ಇನ್ನೂ ಚುನಾವಣೆ ದೃಷ್ಟಿಯಿಂದ ಕುರಾನ್ ಪಠಣಕ್ಕೆ ಜೆಡಿಎಸ್ ನಾಯಕರು ಒತ್ತಡ ಹೇರಿದ್ದಾರೆ, ಈ ಮೂಲಕ ನೀತಿಸಂಹಿತೆ ಉಲ್ಲಂಘಿಸಲಾಗಿದೆ, ಹೀಗಾಗಿ ಅಧಿಕಾರಿಗಳ ವಿರುದ್ಧ ಕ್ರಮ ವಹಿಸಬೇಕು ಎಂದು ಮನವಿ ಮಾಡಿದರು.