ಬೆಂಗಳೂರು: ಸಿದ್ದರಾಮಯ್ಯರಿಗೆ ಅಧಿಕಾರ ಕೊಟ್ಟರೆ ಗೋವು ತಿನ್ನುವವರು ಜಾಸ್ತಿಯಾಗುತ್ತಾರೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಹಾಲು ಕೊಡುವ ಹಸುವನ್ನು ಕಡಿಯುವವರ ಪರ ಇರುವುದು ಸಿದ್ದರಾಮಯ್ಯ,, ಸಿದ್ದರಾಮಯ್ಯ ಗೋ ಹತ್ಯೆ ಮಾಡುವವರ ಪರ ಇದ್ದಾರೆ ಎಂಬುದು ಎಲ್ಲರಿಗೆ ಗೊತ್ತಿದೆ ಎಂದರು. ಸಿದ್ದರಾಮಯ್ಯಗೆ ಹಾಲು ಕೊಡುವ ಗೋವು ಬೇಕಾಗಿಲ್ಲ. ಗೋವು ತಿನ್ನುವವರ ಮತ ಬೇಕು ಅಷ್ಟೆ ಎಂದು ಕಿಡಿಕಾರಿದರು.
ಕೆಎಂಎಫ್ ಬಗ್ಗೆ ನಿಜವಾದ ಕಾಳಜಿ ಬಿಜೆಪಿಗಿದೆ. ಕಾಂಗ್ರೆಸ್, ಜೆಡಿಎಸ್ ನಿಂದ ನಾವು ಪಾಠ ಕಲಿಯಬೇಕಾಗಿಲ್ಲ ಎಂದು ಅಭಿಪ್ರಾಯಪಟ್ಟರು. ಬಂಡೀಪುರದಲ್ಲಿ ಪ್ರಧಾನಿಗೆ ಹುಲಿ ಕಾಣಲಿಲ್ಲ ಎಂಬ ವಿಪಕ್ಷಗಳ ಟೀಕೆಗೆ ತಿರುಗೇಟು ನೀಡಿದ ಸಂಸದ ಪ್ರತಾಪ್ ಸಿಂಹ, ಸಿದ್ದರಾಮಯ್ಯ ನೀವು ಸಿಎಂ ಆಗಿದ್ದವರ ಒಂದು ದಿನವೂ ಬಂಡೀಪುರ, ನಾಗರಹೊಳೆ ಹೋಗಲಿಲ್ಲ. ಮೈಸೂರಿಗೆ ಬಂದು ಕುರಿ ಚರ್ಬಿ ತಿಂದು ಹೋಗ್ತಿದ್ದವರು ನೀವು ನಿಮ್ಮಿಂದ ಪ್ರಧಾನಿಗಳ ಹುಲಿ ಬಗ್ಗೆ ಪಾಠ ಬೇಡ ಎಂದು ಆಕ್ರೋಶಿಸಿದರು.