ಮೈಸೂರು: ‘ವರುಣಾ ಕ್ಷೇತ್ರಕ್ಕೆ ತಾಲೂಕು ಕೇಂದ್ರವಿಲ್ಲದೆ ಅಲ್ಲಿನ ಜನ ಅಬ್ಬೆಪಾರಿಗಳಾಗಿದ್ದಾರೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಸಿದ್ದರಾಮಯ್ಯನವರ ಕೈಯಲ್ಲಿ ಒಂದು ತಾಲೂಕು ಕೇಂದ್ರ ಮಾಡಲು ಆಗಲಿಲ್ಲ, ಸೋಮಣ್ಣನ ಗೆಲ್ಲಿಸಿ ವರುಣಾ ಕ್ಷೇತ್ರವನ್ನ ತಾಲೂಕು ಕೇಂದ್ರ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ.ಸಿಎಂ ಆಗಿಯೂ ಸಿದ್ದರಾಮಯ್ಯನವರು ವರುಣಾ ಅಭಿವೃದ್ಧಿ ಮಾಡಲಿಲ್ಲ. ವರುಣಾ ತಾಲೂಕು ಕೇಂದ್ರವಾಗಬೇಕಿದೆ. ಒಂದೇ ಸರ್ಕಾರಿ ಕಛೇರಿಯಲ್ಲಿ ವರುಣಾ ಜನರ ಕೆಲಸವಾಗಬೇಕು, ಅದು ನಮ್ಮ ಉದ್ದೇಶ ಎಂದರು.
ಸಿದ್ದರಾಮಯ್ಯ 2018 ಕೊನೆ ಚುನಾವಣೆ, ಇನ್ಮುಂದೆ ಸ್ಪರ್ಧಿಸಲ್ಲ ಎಂದಿದ್ದರು, ದರೆ ಇದನ್ನೇ ಪ್ರತೀ ಬಾರಿ ಹೇಳ್ತಾರೆ, ಎಂದು ವ್ಯಂಗ್ಯವಾಡಿದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂತಹ ನಾಯಕರಾದರೂ ನನ್ನಂತೆ ಒಬ್ಬ ಅಭ್ಯರ್ಥಿ ಅಷ್ಟೇ ಎಂದು ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ವರುಣಾದಲ್ಲಿ ಈಗ ನಾನು ನೆಪ ಮಾತ್ರ, ಪಕ್ಷದಲ್ಲಿ ಯಾವ ಮುಖಂಡರು ಚಿಕ್ಕವರಲ್ಲ ಹಾಗೂ ದೊಡ್ಡವರಲ್ಲ. ಇಲ್ಲಿ ಪಕ್ಷ ಹಾಗೂ ಕಾರ್ಯಕರ್ತರು ದೊಡ್ಡವರು ಎಂದಿದ್ದರು.