Monday, March 20, 2023
spot_img
- Advertisement -spot_img

ಗುಂಬಜ್ ಇರುವ ಬಸ್​ ನಿಲ್ದಾಣ ತೆರವಿಗೆ ಹೇಳಿದ್ದೇನೆ ಬಿಜೆಪಿ ಸಂಸದ ಪ್ರತಾಪ್ ಸಿಂಹ

ಮೈಸೂರು: ಬಸ್​ ನಿಲ್ದಾಣಗಳ ಮೇಲೆ ಗುಂಬಜ್​​ ಇರುವುದನ್ನ ಗಮನಿಸಿದ್ದೇನೆ. ಅಂತಹ ಗುಂಬಜ್ ಇರುವ ಬಸ್​ ನಿಲ್ದಾಣ ತೆರವಿಗೆ ಹೇಳಿದ್ದೇನೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ. ಗುಂಬಜ್ ಮಾದರಿಯಲ್ಲಿ ಬಸ್​ ನಿಲ್ದಾಣ ಮಾಡಿದರೇ ತಾವೇ ಅಂತಹ ನಿಲ್ದಾಣಗಳನ್ನು ಹೊಡೆದು ಹಾಕುತ್ತೇವೆ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ಮಧ್ಯದಲ್ಲಿ ದೊಡ್ಡ ಗುಂಬಜ್ ಹಾಗೂ ಅಕ್ಕ ಪಕ್ಕ ಚಿಕ್ಕ ಗುಂಬಜ್ ಗಳಿದ್ರೆ ಅದು ಮಸೀದಿನೇ. ಕೆಆರ್ ಐಡಿಎಲ್ ಇಂಜಿನಿಯರ್ ಗಳಿಗೆ 3-4 ದಿನದಲ್ಲಿ ಗುಂಬಜ್​ ತೆರವುಗೊಳಿಸಲು ಸೂಚಿಸಿದ್ದೇನೆ. ಇಲ್ಲವಾದರೆ ಜೆಸಿಬಿ ತಂದು ನಾನೇ ಒಡೆದು ಹಾಕುತ್ತೇನೆ ಎಂದು ಹೇಳಿದ್ದಾರೆ.ಇದೇ ವೇಳೆ ಈಗಾಗಲೇ ರೈಲೊಂದಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್‌ ಹೆಸರು ನಾಮಕರಣ ಮಾಡಿದಂತೆ, ಮೈಸೂರು ವಿಮಾನ ನಿಲ್ದಾಣಕ್ಕೂ ಅವರ ಹೆಸರಿಡಲಾಗುವುದು ಎಂದು ಹೇಳಿದರು.

ಮೈಸೂರು ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಯ ಒಡೆಯರ್‌ ಹೆಸರಿಡುವುದಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡುವುದಷ್ಟೇ ಬಾಕಿ ಇದೆ ಎಂದರು. ನವೆಂಬರ್ 13 ಅಂದರೆ ನಿನ್ನೆ ಮೈಸೂರಿನ ರಂಗಾಯಣದಲ್ಲಿ ಟಿಪ್ಪು ನಿಜ ಕನಸುಗಳು ನಾಟಕದ ವೇಳೆ ಸಂಸದ ಪ್ರತಾಪ್ ಸಿಂಹ ಮಾಡಿದ್ದ ಭಾಷಣ ವೈರಲ್ ಆಗಿದ್ದು, ಭಾಷಣದಲ್ಲಿ ಗುಂಬಜ್ ಮಾದರಿಯಲ್ಲಿ ಬಸ್​ ನಿಲ್ದಾಣ ನಿರ್ಮಿಸುವಂತಿಲ್ಲ.

ಒಂದು ವೇಳೆ ನಿರ್ಮಿಸಿದರೆ ಒಡೆದು ಹಾಕುವುದು ನಿಶ್ಚಿತ ಎಂದು ಹೇಳಿದ್ದಾರೆ. ಟಿಪ್ಪು ವೀರನಲ್ಲ. ಅವನು ಯಾವ ಯುದ್ಧದಲ್ಲೂ ಹೋರಾಡಿಲ್ಲ. ಯಾವ ಯುದ್ಧವನ್ನೂ ಗೆಲ್ಲಲಿಲ್ಲ. ಅಂಥವನು ಹೇಗೆ ಸುಲ್ತಾನ ಆಗಲು ಸಾಧ್ಯ? ಅವನು ಬರಿಗೈಯಲ್ಲಿ ಹುಲಿಯ ಜತೆ ಸೆಣಸಿ ಬದುಕಲು ಸಾಧ್ಯವಿಲ್ಲ. ಅವನು ಯಾವಾಗ ಹುಲಿಯ ಜೊತೆ ಹೋರಾಡಿದ್ದ? ಹೊಯ್ಸಳ ಕೂಡ ಹುಲಿಯನ್ನು ಮಣಿಸಿದ್ದು ಭರ್ಜಿಯಿಂದ ಎಂದು ಹೇಳಿದರು.

Related Articles

- Advertisement -

Latest Articles