Thursday, June 8, 2023
spot_img
- Advertisement -spot_img

ಕೈ ಅಧಿಕಾರಕ್ಕೆ ಬಂದ್ರೆ ಬಿಜೆಪಿ ನೀಡಿದ ಮೀಸಲಾತಿಗೆ ಕಂಟಕ : ಪ್ರತಾಪ್ ಸಿಂಹ

ಮೈಸೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕಕ್ಕೆ ಸಿಗುವ ಗ್ಯಾರಂಟಿ ಲಾಡೆನ್ ಮುಲ್ಲಾ ನೇತೃತ್ವದ ಸರ್ಕಾರ ಎಂದು ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದರು.

ಮೈಸೂರಿನ ಎಲಚಿಗೆರೆ ಬೋರೆ ಗ್ರಾಮದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಿಜೆಪಿಯ ವಿವಿಧ ಸಮುದಾಯಗಳಿಗೆ ನೀಡಿದ ಮೀಸಲಾತಿಗೆ ಕಂಟಕ ಬರಲಿದೆ. ಹಿಂದೂಗಳ ಮೀಸಲಾತಿ ಕಿತ್ತುಕೊಂಡು ಮುಸ್ಲಿಮರಿಗೆ ಕೊಡುತ್ತಾರೆ. ಸಿದ್ದರಾಮಯ್ಯ ಲಿಂಗಾಯತ ಸಮುದಾಯವರು ಭ್ರಷ್ಟರು ಅಂತ ಹೇಳುತ್ತಾರೆ. ಸಿದ್ದರಾಮಯ್ಯ ಕ್ಷಮೆ ಕೇಳಿದ್ದು ಬೆಕ್ಕು ಸನ್ಯಾಸ ಸ್ವೀಕರಿಸಿದಂತೆ ಎಂದರು.

ಯಾವುದೇ ಪ್ರಬಲ ಅಭ್ಯರ್ಥಿ ವಿರುದ್ಧ ಸಿದ್ದರಾಮಯ್ಯ ಗೆದ್ದಿಲ್ಲ. ಸಿದ್ದರಾಮಯ್ಯ ಪರ ಮಲ್ಲಿಕಾರ್ಜುನ ಖರ್ಗೆ, ಡಿಕೆ ಶಿವಕುಮಾರ್ ಮತಯಾಚನೆಗೆ ಬರಲಿಲ್ಲ. ಯಾಕೆಂದರೆ ಸಿದ್ದರಾಮಯ್ಯ ಅವರನ್ನು ಗೆಲ್ಲಿಸಿದರೆ ಕಾಂಗ್ರೆಸ್ ಮುಗಿಸುತ್ತಾರೆ ಅಂತಾ ಅವರಿಗೆ ಗೊತ್ತಿದೆ ಎಂದರು.ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕನ್ನಡಿಗರ ಸರ್ಕಾರ ರಚನೆ ಆಗಲ್ಲ ಬದಲಾಗಿ ತಾಲಿಬಾನ್ ಸರ್ಕಾರ ರಚನೆ ಆಗುತ್ತದೆ ಎಂದು ತಿಳಿಸಿದರು.

ತಾಲಿಬಾನ್ ಸರ್ಕಾರ ಬಂದರೆ ಹಿಂದೂ ಸಂಘಟನೆಗಳಿಗೆ ಮಾತ್ರವಲ್ಲ ಹಿಂದುಗಳಿಗೆ, ಹಿಂದೂತ್ವಕ್ಕೆ ಉಳಿಗಾಲ ಇರಲ್ಲ. ರಾಮನ ಆದರ್ಶ ಪಾಲಿಸುವ ಯಾರಿಗೂ ಉಳಿಗಾಲವಿಲ್ಲ ಎಂದಿದ್ದರು.

Related Articles

- Advertisement -spot_img

Latest Articles