Thursday, June 8, 2023
spot_img
- Advertisement -spot_img

ಬೆಳಗ್ಗೆ 8 ಗಂಟೆಯಿಂದ ಮತ ಎಣಿಕಾ ಕಾರ್ಯ ಆರಂಭ : ಬಿಗಿ ಭದ್ರತೆ

ಬೆಂಗಳೂರು: ನಗರ ಜಿಲ್ಲಾ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯಕ್ಕೆ ನಾಲ್ಕು ಸಾವಿರ ಮಂದಿ ಸಿಬ್ಬಂದಿ ಬಳಕೆ ಮಾಡಲಾಗುತ್ತಿದೆ ಎಂದು ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ತುಷಾರ್‌ ಗಿರಿನಾಥ್‌ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ , ಪ್ರತಿ ಟೇಬಲ್‌ಗೆ ಮೈಕ್ರೋ ಅಬ್ಸರ್ವರ್‌, ಮತ ಎಣಿಕೆ ಮೇಲ್ವಿಚಾರಕರು ಮತ್ತು ಮತ ಎಣಿಕೆ ಸಹಾಯಕರು ಇರಲಿದ್ದಾರೆ. ನಗರದ ನಾಲ್ಕು ಮತ ಎಣಿಕಾ ಕೇಂದ್ರದಲ್ಲಿ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕಾ ಕಾರ್ಯ ಆರಂಭಗೊಳ್ಳಲಿದೆ. 28 ವಿಧಾನಸಭಾ ಕ್ಷೇತ್ರದ ಮತ ಎಣಿಕೆಗೆ ಒಟ್ಟು 481 ಟೇಬಲ್‌ ವ್ಯವಸ್ಥೆ ಮಾಡಲಾಗಿದೆ. ಅಂಚೆ ಮತದಾನದ ಎಣಿಕೆಗೆ ಎರಡರಿಂದ ಮೂರು ಟೇಬಲ್‌ಗಳನ್ನು ಮೀಸಲಿಡಲಾಗುವುದು ಎಂದರು.

ಈಗಾಗಲೇ 14 ಮಂದಿ ವೀಕ್ಷಕರು ಇದ್ದಾರೆ. ಹೊಸದಾಗಿ 14 ವೀಕ್ಷಕರು ದೆಹಲಿಯಿಂದ ಆಗಮಿಸಿದ್ದಾರೆ. ಹೀಗಾಗಿ, ತಲಾ ಒಂದು ವಿಧಾನಸಭಾ ಕ್ಷೇತ್ರಕ್ಕೆ ಒಬ್ಬ ವೀಕ್ಷಕರಂತೆ 28 ವೀಕ್ಷಕರನ್ನು ನಿಯೋಜನೆ ಮಾಡಲಾಗುತ್ತದೆ ಬೆಂಗಳೂರಿನ ನಾಲ್ಕು ಕಡೆ 28 ವಿಧಾನಸಭಾ ಕ್ಷೇತ್ರ ಮತ ಎಣಿಕೆ ಕಾರ್ಯ ನಡೆಸುವುದಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ತಲಾ ಒಂದು ಕೇಂದ್ರದಲ್ಲಿ ಏಳು ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯ ನಡೆಯಲಿದೆ. ಒಂದೊಂದು ಕೇಂದ್ರಕ್ಕೆ ತಲಾ 1 ಸಾವಿರ ಅಧಿಕಾರಿ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ ಎಂದು ತಿಳಿಸಿದರು.

Related Articles

- Advertisement -spot_img

Latest Articles