Monday, March 27, 2023
spot_img
- Advertisement -spot_img

ನಾಡಹಬ್ಬ ವಿಶ್ವವಿಖ್ಯಾತ ಮೈಸೂರು ದಸರಾಗೆ ಚಾಲನೆ, ತಾಯಿ ಚಾಮುಂಡೇಶ್ವರಿಗೆ ರಾಷ್ಟ್ರಪತಿ ಮುರ್ಮು ಪುಷ್ಪಾರ್ಚನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ವಿಧ್ಯುಕ್ತ ಚಾಲನೆ ನೀಡಿದರು. ಬೆಳ್ಳಿರಥದಲ್ಲಿ ಮಹಿಶಾಸುರ ಮರ್ದಿನಿ ಅವತಾರದ ಪಂಚಲೋಹದ ವಿಗ್ರಹಕ್ಕೆ ಶುಭ ವೃಶ್ಚಿಕ ಲಗ್ನದಲ್ಲಿ ರಾಷ್ಟ್ರಪತಿಗಳು ಪುಷ್ಪಾರ್ಚನೆ ಮಾಡುವುದರೊಂದಿಗೆ 412ನೇ ದಸರಾಗೆ ಚಾಲನೆ ನೀಡಿದ್ರು.

ಇದಕ್ಕೂ ಮೊದಲು ನಾಡಹಬ್ಬ ಮೈಸೂರು ದಸರಾಕ್ಕೆ ಚಾಲನೆ ನೀಡಲೆಂದು ಬಂದಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೆಟ್ಟದ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ಕುಂಕುಮಾರ್ಚನೆಯ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ಸಚಿವರು ಉಪಸ್ಥಿತರಿದ್ದರು ಬಳಿಕವೇದಿಕೆಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್‌ ಹಾಗೂ ಸಿಎಂ ಬೊಮ್ಮಾಯಿ ಬೆಳ್ಳಿರಥದಲ್ಲಿ ಮಹಿಶಾಸುರ ಮರ್ದಿನಿ ಅವತಾರದ ಪುಷ್ಪಾರ್ಚನೆ ಮಾಡುವುದರೊಂದಿಗೆ ದಸರಾದ ವಿಧಿವಿಧಾನಗಳು ಆರಂಭವಾದವು. ಕರ್ನಾಟಕದ ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗಾಗಿ ಇಂದು ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

Live Link :-

Related Articles

- Advertisement -

Latest Articles