ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಆಪರೇಷನ್ ಹಸ್ತ, ಆಪರೇಷನ್ ಕಮಲದ ವಿಚಾರಗಳು ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿರುವ ನಡುವೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರು ಇಂದು ಮಹತ್ವದ ಸುದ್ದಿಗೋಷ್ಠಿ ಕರೆದಿದ್ದಾರೆ.
ಇಂದು ಬೆಳಿಗ್ಗೆ 11 ಗಂಟೆಗೆ ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಯಲಿದ್ದು, ಮಹತ್ವದ ಘೋಷಣೆಯೊಂದನ್ನು ಮಾಡುವುದಾಗಿ ದೇವೇಗೌಡರು ಈಗಾಗಲೇ ತಿಳಿಸಿದ್ದಾರೆ. ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ತಿಂಗಳುಗಳು ಬಾಕಿ ಇರುವ ಹಿನ್ನೆಲೆ ದೇವೇಗೌಡರ ಹೊಸ ಘೋಷಣೆ ಏನಿರಬಹುದು? ಎಂಬ ಕುತೂಹಲ ಮೂಡಿದೆ.
ಇದನ್ನೂ ಓದಿ : ತಮ್ಮದೇ ಸಮುದಾಯದ ನಾಯಕನ ಬಗ್ಗೆ ಬೇಸರ ಹೊರ ಹಾಕಿದ ನಿರ್ಮಲಾನಂದ ಸ್ವಾಮೀಜಿ
ಭಾನುವಾರ ಸಂಜೆ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ್ದ ದೇವೇಗೌಡರು, ರಾಜ್ಯದಲ್ಲಿ ಹಲವಾರು ಸಮಸ್ಯೆಗಳಿವೆ. 91ನೇ ವಯಸ್ಸಿನಲ್ಲಿ ಸಮಸ್ಯೆಗಳು ನನ್ನ ಮುಂದೆ ಬರುತ್ತಿವೆ. ಎಲ್ಲಾ ವಿಷಯಗಳ ಬಗ್ಗೆ ನಾಳೆ ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.
ನೈಸ್ ಹಗರಣ ಪ್ರಸ್ತಾಪ ಸಾಧ್ಯತೆ : ಮೂಲಗಳ ಪ್ರಕಾರ ಇಂದಿನ ಸುದ್ದಿಗೋಷ್ಠಿಯಲ್ಲಿ ದೇವೇಗೌಡರು ನೈಸ್ ಹಗರಣದ ಕುರಿತು ಮಾತನಾಡುವ ಸಾಧ್ಯತೆ ಇದೆ. ಕಳೆದ ಕೆಲ ದಿನಗಳಿಂದ ಕುಮಾರಸ್ವಾಮಿ ನೈಸ್ ಯೋಜನೆಯಲ್ಲಿ ಹಗರಣ ನಡೆದಿದೆ ಎಂದು ಸರ್ಕಾರದ ವಿರುದ್ಧ ಆರೋಪ ಮಾಡುತ್ತಲೇ ಇದ್ದಾರೆ. ಇದೇ ವಿಚಾರವಾಗಿ ದೇವೇಗೌಡರು ಮಾತನಾಡುವ ಸಾಧ್ಯತೆ ಇದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.