ಕೋಲಾರ: ಕೋಲಾರದಿಂದ ಸ್ಪರ್ಧಿಸಲು ಒತ್ತಡ ಹೆಚ್ಚುತ್ತಿದ್ದು, ಹೀಗಾಗಿ ಯಾವುದೇ ಘೋಷಣೆ ಮಾಡುವ ಮೊದಲು ಕ್ಷೇತ್ರಕ್ಕೆ ಭೇಟಿ ನೀಡಿ ಅಲ್ಲಿನ ಜನರ ನಾಡಿ ಮಿಡಿತ ಅರಿತುಕೊಳ್ಳಲು ವಿವಿಧ ಸಮುದಾಯಗಳ ಸದಸ್ಯರು, ದಲಿತ ಸಂಘಟನೆಗಳು ಹಾಗೂ ನಾಗರಿಕ ಸಮಾಜದವರೊಂದಿಗೆ ಚರ್ಚಿಸಲಿದ್ದಾರೆ ಎಂದು ಸಿದ್ದರಾಮಯ್ಯ ಅವರ ಆಪ್ತ ಮೂಲಗಳು ತಿಳಿಸಿವೆ.
ಕೋಲಾರದಿಂದ ಸ್ಪರ್ಧಿಸುವಂತೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಮೇಲೆ ವಿವಿಧ ಸಮುದಾಯಗಳ ಮುಖಂಡರು ಒತ್ತಡ ಹೇರುತ್ತಿರುವ ಹಿನ್ನೆಲೆಯಲ್ಲಿ ಅಹಿಂದ ಮುಖಂಡ ಸಿದ್ದರಾಮಯ್ಯ ನ.13ರಂದು ಕೋಲಾರಕ್ಕೆ ಭೇಟಿ ನೀಡಲಿದ್ದಾರೆ.ಕೋಲಾರದ ಜನರನ್ನು ನಾನು ನಿರಾಶೆಗೊಳಿಸುವುದಿಲ್ಲ ಎಂದು ಹೇಳಿದ್ದಾರೆ. ನಾನು ಕ್ಷೇತ್ರಕ್ಕೆ ಭೇಟಿ ನೀಡುತ್ತೇನೆ ಮತ್ತು ಅವರೊಂದಿಗೆ ಚರ್ಚಿಸುತ್ತೇನೆ ಎಂದು ಹೇಳಿದ್ದಾರೆ.
ಮೈಸೂರಿನ ಕಾಂಗ್ರೆಸ್ ನಾಯಕರು ಕೂಡ ಸಿದ್ದರಾಮಯ್ಯ ಅವರಿಗೆ ಸುರಕ್ಷಿತವೆನಿಸಿದ ವರುಣಾ ಕ್ಷೇತ್ರದಿಂದ ಸ್ಪರ್ಧಿಸಬೇಕೆಂದು ಬಯಸಿದ್ದಾರೆ. ಅಲ್ಲಿಂದ ಸ್ಪರ್ಧಿಸಿದರೆ ಸಿದ್ದರಾಮಯ್ಯನವರು ರಾಜ್ಯದ ಬೇರೆ ಬೇರೆ ಕಡೆ ಪ್ರಚಾರ ಮಾಡಲು ಮುಕ್ತರಾಗುತ್ತಾರೆ ಎಂಬುದು ಅವರ ಅಭಿಪ್ರಾಯ. ಶಾಸಕ ಯತೀಂದ್ರ ಕೂಡ ತಮ್ಮ ತಂದೆ ಸ್ಪರ್ಧಿಸಲು ಬಯಸಿದರೆ ಕ್ಷೇತ್ರವನ್ನು ಖಾಲಿ ಮಾಡುವುದಾಗಿ ಹೇಳಿದ್ದಾರೆ.
ಮಾಜಿ ಸಚಿವರಾದ ರಮೇಶ್ ಕುಮಾರ್, ಕೃಷ್ಣ ಬೈರೇಗೌಡ, ಶಾಸಕರಾದ ನಾರಾಯಣಸ್ವಾಮಿ, ಶ್ರೀನಿವಾಸಗೌಡ , ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕೋಲಾರದಿಂದ ಸ್ಪರ್ಧಿಸುವಂತೆ ಮನವಿ ಮಾಡಿದ್ದಾರೆ, ಸಿದ್ದರಾಮಯ್ಯನವರ ಜನಪ್ರಿಯತೆ, ಅವರ ಕಾರ್ಯಕ್ರಮಗಳು, ಕೆಸಿ ವ್ಯಾಲಿ ಯೋಜನೆಯ ಲಾಭ ಇತ್ಯಾದಿಗಳ ಬಗ್ಗೆಯೂ ಸಮೀಕ್ಷೆ ನಡೆಸಲಾಗಿದೆ