Tuesday, November 28, 2023
spot_img
- Advertisement -spot_img

ನವೆಂಬರ್ 11 ರಂದು ಬೆಂಗಳೂರಿಗೆ ಪಿಎಂ ಮೋದಿ ಭೇಟಿ , ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಬೆಂಗಳೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ನವೆಂಬರ್ 11 ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದು, ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ , ವಿಮಾನ ನಿಲ್ದಾಣದ ಆವರಣದಲ್ಲಿರುವ 108 ಅಡಿ ಎತ್ತರದ ಕೆಂಪೇಗೌಡ ಪ್ರತಿಮೆ ಅನಾವರಣ ಮಾಡಲಿದ್ದು, ನಂತರ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಕೆಂಪೇಗೌಡರು ಬೆಂಗಳೂರಿಗೆ ಹೊಸ ಕೆರೆ ನಿರ್ಮಾಣ ಮಾಡಿದ್ದಾರೆ. ಗಡಿ ಗೋಪುರ ಮಾಡಿದ್ದಾರೆ. ಈ ನಗರ ಕೇವಲ ವಾಸಿಸಲು ಅಷ್ಟೆ ಅಲ್ಲ, ಈ ನಗರದಲ್ಲಿ ಇವತ್ತು ವ್ಯಾಪಾರ ವಾಣಿಜ್ಯ ಬೆಳೆಯಬೇಕು ಎನ್ನುವ ದೃಷ್ಟಿಯಿಂದ ಮಾರುಕಟ್ಟೆಗಳನ್ನು ಇಲ್ಲಿ ಕಟ್ಟಿದ್ದಾರೆ. ಅದು ಪ್ರಗತಿಯ ಒಂದು ಚಿನ್ನ ಎಂದು ಸಿಎಂ ಬೊಮ್ಮಾಯಿ ಬಣ್ಣಿಸಿದರು.

ಕಾರ್ಯಕ್ರಮದಂದು ಚೆನ್ನೈ ಮೈಸೂರು ನಡುವೆ, ದಕ್ಷಿಣ ಭಾರತದ ಮೊದಲ ಹಾಗೂ ಭಾರತದ ಐದನೇ ವಂದೇ ಭಾರತ್ ಎಕ್ಸ್‌ ಪ್ರೆಸ್‌ ಪ್ರಧಾನಿ ಚಾಲನೆ ನೀಡಲಿದ್ದಾರೆ, ಬೆಂಗಳೂರಿನಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಕ್ರಮಗಳ ಸಿದ್ಧತೆ ಕುರಿತು ಪ್ರಧಾನಿ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚಿಸಿದ ನಂತರ ಈ ವಿಷಯ ತಿಳಿಸಿದರು.

ಇನ್ನೂ ನವೆಂಬರ್‌ 10 ರಂದು ರಾತ್ರಿ ಬೆಂಗಳೂರಿಗೆ ಆಗಮಿಸಲಿರುವ ಮೋದಿ 11 ರಂದು ಎರಡು ಕಾರ್ಯಕ್ರಮದಲ್ಲಿ ಭಾಗವಹಿಸಿ ದೆಹಲಿಗೆ ವಾಪಸ್ಸಾಗಲಿದ್ದಾರೆ ಎಂಬ ಮಾಹಿತಿ ದೊರೆತಿದೆ.

Related Articles

- Advertisement -spot_img

Latest Articles