ಜೋಹಾನ್ಸ್‌ಬರ್ಗ್/ನವದೆಹಲಿ: ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗಿಯಾಗಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಗ್ರೀಸ್ ಪ್ರವಾಸ ಕೈಗೊಂಡಿದ್ದಾರೆ. ಶೃಂಗಸಭೆ ಮುಕ್ತಾಯಗೊಂಡಿದ್ದು, ಜೋಹಾನ್ಸ್‌ಬರ್ಗ್‌ನಿಂದ ನೇರವಾಗಿ ಗ್ರೀಸ್ ಪ್ರವಾಸ ಕೈಗೊಂಡಿದ್ದಾರೆ.
ಗ್ರೀಕ್ ಪ್ರಧಾನಿ ಕಿರಿಯಾಕೋಸ್ ಮಿಟ್ಸೊಟಾಕಿಸ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಇಂದು ಪ್ರವಾಸ ಕೈಗೊಂಡಿದ್ದಾರೆ. 40 ವರ್ಷದಲ್ಲಿ ಇದೇ ಮೊದಲು ಭಾರತದ ಪ್ರಧಾನಿಯೊಬ್ಬರು ಗ್ರೀಸ್‌ಗೆ ಭೇಟಿ ನೀಡುತ್ತಿದ್ದಾರೆ. ಪ್ರಧಾನಿ ಮೋದಿ ಅವರು ತಮ್ಮ ಗ್ರೀಕ್ ಸಹವರ್ತಿ ಕಿರಿಯಾಕೋಸ್ ಮಿಟ್ಸೋಟಾಕಿಸ್ ಅವರನ್ನು ಭೇಟಿ ಮಾಡಲಿದ್ದಾರೆ ಮತ್ತು ಉಭಯ ರಾಷ್ಟ್ರಗಳ ನಡುವಿನ ಬಾಂಧವ್ಯವನ್ನು ಮತ್ತಷ್ಟು ವೃದ್ಧಿಸುವ ಕುರಿತು ಚರ್ಚೆ ನಡೆಯಲಿದೆ.
ಇದನ್ನೂ ಓದಿ: ಹಳೆಯ ಮನೆಗೆ ವಾಪಸ್ಸಾಗಲು ನಿರಾಕರಿಸಿದ ರಾಹುಲ್
ಮೋದಿ ಅವರು ಎರಡೂ ದೇಶಗಳ ಉದ್ಯಮಿಗಳ ಜೊತೆ ಸಂವಾದ ನಡೆಸಲಿದ್ದಾರೆ. ಅಲ್ಲದೆ ಗ್ರೀಸ್‌ನಲ್ಲಿರುವ ಭಾರತೀಯ ಸಮುದಾಯದೊಂದಿಗೆ ಸಂವಾದ ನಡೆಸಲಿದ್ದಾರೆ. ಭೇಟಿಯ ಸಮಯದಲ್ಲಿ ಗ್ರೀಕ್ ಪ್ರಧಾನಿ ಆಯೋಜಿಸುವ ಭೋಜನ ಕೂಟದಲ್ಲೂ ಮೋದಿ ಭಾಗಿಯಾಗಲಿದ್ದಾರೆ. ಬಳಿಕ ಅಥೆನ್ಸ್‌ನಲ್ಲಿರುವ ಹುತಾತ್ಮ ಯೋಧರ ಸಮಾಧಿಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಲಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.