ಬೆಂಗಳೂರು : ಭಾರತದ ಚಂದ್ರಯಾನ-3 ಅಭೂತಪೂರ್ವ ಯಶಸ್ಸು ಕಂಡ ಬಳಿಕ ಇಸ್ರೋ ಸಾಧನೆಯನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿಯವರು ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಶಾಸಕ ಭೈರತಿ ಬಸವರಾಜ ಭದ್ರತಾ ವ್ಯವಸ್ಥೆಯನ್ನು ಪರಿಶೀಲನೆ ನಡೆಸಿದ್ದಾರೆ.
ನಾಳೆ ಬೆಳಿಗ್ಗೆ ನಗರಕ್ಕೆ ಪ್ರಧಾನಿಯವರ ಭೇಟಿಯ ಹಿನ್ನೆಲೆ ಇಂದು ಬೆಳಂಬೆಳಿಗ್ಗೆ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಭದ್ರತೆಯ ಬಗ್ಗೆ ಚರ್ಚಿಸಿದ್ದಾರೆ.
ಬೆಳಗಿನ ಜಾವ 5.55ಕ್ಕೆ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿರುವ ಪ್ರಧಾನಿ ಮೋದಿಯವರು, ಬಳಿಕ ರೋಡ್‌ಶೋ ಮೂಲಕ ಇಸ್ರೋ ಕಚೇರಿಯವರೆಗೆ ತೆರಳಿ ಅಲ್ಲಿ ವಿಜ್ಞಾನಿಗಳನ್ನು ಅಭಿನಂದಿಸಿದ ನಂತರ ನವದೆಹಲಿಗೆ ವಾಪಸ್ ಆಗಲಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.