Monday, March 27, 2023
spot_img
- Advertisement -spot_img

ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಲಕ್ಷಾಂತರ ಜನರು ಆಗಮನ : ವಿವಿಧ ಕಾರ್ಯಕ್ರಮಗಳಿಗೆ ಚಾಲನೆ

ಯಾದಗಿರಿ : ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಲಕ್ಷಾಂತರ ಜನರು ಆಗಮಿಸುತ್ತಿದ್ದು, ಮೋದಿ ವೇದಿಕೆ ಅಲಂಕರಿಸುತ್ತಿದ್ದಂತೆ ಮೋದಿ ಘೋಷದೊಂದಿಗೆ ಸ್ವಾಗತಿಸಲಾಯಿತು. ನೂರಾರು ಬಸ್ ಸಂಚಾರದಿಂದ ಕಲಬುರಗಿ ಮಳಖೇಡ್ ರಸ್ತೆ ಫುಲ್‌ ಜಾಮ್ ಆಗಿತ್ತು.ಪ್ರಧಾನಿ ಮೋದಿ ಇಂದು ಕಲ್ಯಾಣ ಕರ್ನಾಟಕ ಭಾಗಕ್ಕೆ ಆಗಮಿಸಿದ್ದು, ಈ ವೇಳೆ ಅವರಿಗೆ ಸ್ಪೆಷಲ್‌ ಗಿಫ್ಟ್‌ ಸಲ್ಲಿಕೆಯಾಗಲಿದೆ.

ಕಲಬುರಗಿ ಜಿಲ್ಲಾಡಳಿತದಿಂದ ವಿಶೇಷ ಉಡುಗೊರೆ ತಯಾರಾಗಿದ್ದು, ಜಗತ್ತಿನ ಮೊದಲ ಸಂಸತ್ತು ಎಂದು ಗುರುತಿಸಲಾದ ಅನುಭವ ಮಂಟಪವನ್ನು ನೀಡಲಾಗುತ್ತದೆ. 12ನೇ ಶತಮಾನದ ಅನುಭವ ಮಂಟಪದ ವರ್ಣಚಿತ್ರದ ಉಡುಗೊರೆ ನೀಡಲಾಗುತ್ತದೆ ಎಂದು ತಿಳಿದುಬಂದಿದೆ.

ಕಲಬುರಗಿಯ ಖ್ಯಾತ ಚಿತ್ರಕಲಾವಿದ ರಚನೆಯ ಈ ವರ್ಣಚಿತ್ರವನ್ನು ಪ್ರಧಾನಿ ಮೋದಿಗೆ ನೀಡಲು ಜಿಲ್ಲಾಡಳಿತ ಸಜ್ಜಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜ.19ರಂದು ಸೇಡಂ ತಾಲ್ಲೂಕಿನ ಮಳಖೇಡದಲ್ಲಿ ತಾಂಡಾ ನಿವಾಸಿಗಳಿಗೆ ಹಕ್ಕು ಪತ್ರ ವಿತರಿಸಲು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ಹಾಗೂ ಸಾರ್ವಜನಿಕರ ಸುಗಮ ಸಂಚಾರದ ದೃಷ್ಠಿಯಿಂದ ಸೇಡಂ-ಕಲಬುರಗಿ ಮುಖ್ಯ ರಸ್ತೆಯಲ್ಲಿ ಸಂಚರಿಸುವ ವಾಹನಗಳ ಮಾರ್ಗವನ್ನು ಬದಲಾವಣೆ ಮಾಡಲಾಗಿದ್ದು, ವಾಹನಗಳು ಪರ್ಯಯಾ ಮಾರ್ಗದಲ್ಲಿ ಸಂಚರಿಸಬೇಕೆಂದು ಕರ್ನಾಟಕ ಪೊಲೀಸ್‌ ಕಾಯ್ದೆ ಜಿಲ್ಲಾಧಿಕಾರಿ ಯಶವಂತ ಗುರುಕರ್‌ ಆದೇಶ ಹೊರಡಿಸಿದ್ದಾರೆ.

ಯಾದಗಿರಿ ಜಿಲ್ಲೆ ಸುರಪುರ ಮತಕ್ಷೇತ್ರದ ಕೊಡೇಕಲ್‌ ಗ್ರಾಮದಲ್ಲಿ 4,223 ಕೋಟಿ ರು.ಗಳ ವೆಚ್ಚದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಬಳಿಕ, ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಮಳಖೇಡದಲ್ಲಿ ತಾಂಡಾ ಹಾಗೂ ಹಟ್ಟಿಗಳಲ್ಲಿ ವಾಸವಿರುವ 51,900 ಬಡ ಕುಟುಂಬಗಳಿಗೆ ಏಕಕಾಲದಲ್ಲಿ ಹಕ್ಕುಪತ್ರ ವಿತರಣೆಗೆ ನಿಶಾನೆ ತೋರಲಿದ್ದಾರೆ.

ನಾರಾಯಣಪುರ ಬಸವ ಸಾಗರ ಜಲಾಶಯದ ಗೇಟುಗಳ ಸ್ಕಾಡಾ (ಜಿಪಿಎಸ್‌-ರಿಮೋಟ್‌ ಆಧಾರಿತ ಜಲಾಶಯ ಗೇಟುಗಳ ಚಾಲನೆ) ವ್ಯವಸ್ಥೆ ಉದ್ಘಾಟನೆ, ಜಲಧಾರೆ, ಅಮೃತ್‌ ಎರಡನೇ ಹಂತದ ಅಟಲ್‌ ಮಿಷನ್‌ ಸೇರಿ 4,223 ಕೋಟಿ ರು.ಗಳ ವೆಚ್ಚದ ವಿವಿಧ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. 3 ಲಕ್ಷಕ್ಕೂ ಅಧಿಕ ಮಂದಿ ಈ ಸಮಾವೇಶದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದ್ದು, ಈ ಕಾರ್ಯಕ್ರಮಕ್ಕಾಗಿ ವಿಶಾಲ ಪ್ರದೇಶದಲ್ಲಿ ಬೃಹತ್‌ ವೇದಿಕೆ ನಿರ್ಮಿಸಲಾಗಿದೆ.

Related Articles

- Advertisement -

Latest Articles