ಬೆಂಗಳೂರು: ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದಿವ್ಯಾಂಗರು, ಅವಕಾಶ ವಂಚಿತರ ಶ್ರೇಯೋಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.
ಕೃತಕ ಅಂಗಾಂಗ ಜೋಡಣಾ ಶಿಬಿರದಲ್ಲಿ ಮಾತನಾಡಿ, ಕೇಂದ್ರ ಸಾಮಾಜಿಕ ನ್ಯಾಯ, ಸಬಲೀಕರಣ ಸಚಿವಾಲಯ ದಿವ್ಯಾಂಗರ ಶ್ರೇಯೋಭಿವೃದ್ಧಿಗೆ ಉತ್ತಮವಾಗಿ ಕೆಲಸ ಮಾಡುತ್ತಿದೆ ಎಂದು ವಿಶ್ವಾಸವ್ಯಕ್ತಪಡಿಸಿದರು. ದಿವ್ಯಾಂಗ ಸಮೂಹಕ್ಕೆ ನಾರಾಯಣ್ ಸೇವಾ ಸಂಸ್ಥಾನ್ ಉತ್ತಮವಾಗಿ ಸ್ಪಂದಿಸುತ್ತಿದೆ. ಬದುಕು– ಬದುಕಲು ಬಿಡಿ ತತ್ವದಡಿ ಇದು ಕಾರ್ಯನಿರ್ವಹಿಸುತ್ತಿದೆ. ಇನ್ನೂ ಇದೇ ವೇಳೆ ಎಡಿಐಪಿ ಯೋಜನೆಯಡಿಯಲ್ಲಿ ಸ್ಮಾರ್ಟ್ ಫೋನ್, ವಾಕಿಂಗ್ ಸ್ಟಿಕ್ ಸೇರಿ ಇತರ ಉಪಕರಣಗಳು ಲಭ್ಯವಾಗಲಿದೆ.
ನಾರಾಯಣ ಸೇವಾ ಸಂಸ್ಥಾನದಂತಹ ಸಂಸ್ಥೆಗಳು ಸರ್ಕಾರದ ಸಾಮಾಜಿಕ ಯೋಜನೆಗಳನ್ನು ನಿರ್ಗತಿಕರಿಗೆ, ಬಡವರಿಗೆ ಮತ್ತು ಅಂಗವಿಕಲರಿಗೆ ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ, ಪ್ರತಿಯೊಬ್ಬರೂ ಸುಖವಾಗಿರಬೇಕು ಎಂಬುದು ನಮ್ಮ ಸಂಸ್ಕೃತಿಯ ಉದಾತ್ತ ಚಿಂತನೆಯಾಗಿದೆ. ಈ ಕುರಿತು ನಮಗೆ ಮಹಾಪುರುಷರು ಪ್ರೇರಣೆ ನೀಡಿದ್ದಾರೆ ಎಂದು ಹೇಳಿದರು.