ಬೆಂಗಳೂರು : ಖಾಸಗಿ ಸಾರಿಗೆ ಒಕ್ಕೂಟದಿಂದ ಇಂದು ರಾಜ್ಯ ಸರ್ಕಾರದ ವಿರುದ್ಧ ನಡೆಸಲಾಗುತ್ತಿರುವ ಪ್ರತಿಭಟನಾ ಜಾಥಾ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಪ್ರಾರಂಭವಾಗಿ, ಫ್ರೀಡಂ ಪಾರ್ಕ್ ತಲುಪಿದೆ.
ಮೂವತ್ತೆರಡಕ್ಕೂ ಹೆಚ್ಚು ಖಾಸಗಿ ಸಾರಿಗೆ ಒಕ್ಕೂಟದ ಸಾವಿರಾರು ಚಾಲಕರು ಬೀದಿಗಿಳಿದು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕೈಯಲ್ಲಿ ನಾಮಫಲಕ ಹಿಡಿದುಕೊಂಡು ಕಾಲ್ನಡಿಗೆ ಹಾಗೂ ಆಟೋಗಳ ಮೂಲಕ ಹೋರಾಟಗಾರರು ಫ್ರೀಡಂ ಪಾರ್ಕ್‌ನತ್ತ ಆಗಮಿಸುತ್ತಿದ್ದಾರೆ.


ಇದನ್ನೂ ಓದಿ : ನೈತಿಕತೆ ಇಲ್ಲದವ್ರು, ನೈತಿಕ ಬೆಂಬಲ ನೀಡ್ತಿದ್ದಾರೆ : ರಾಮಲಿಂಗಾ ರೆಡ್ಡಿ
ತಂಡೋಪತಂಡವಾಗಿ ಆನಂದರಾವ್ ವೃತ್ತದ ಮಾರ್ಗವಾಗಿ ಪ್ರತಿಭಟನಾ ಸ್ಥಳವಾಗಿರುವ ಫ್ರೀಡಂ ಪಾರ್ಕ್ ವರೆಗೆ ಮೆರವಣಿಗೆ ಹೊರಟಿರುವ ಖಾಸಗಿ ಸಾರಿಗೆ ಒಕ್ಕೂಟದ ಕಾರ್ಯಕರ್ತರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಪ್ರೀಡಂ ಪಾರ್ಕ್‌ನಲ್ಲಿ ಈಗಾಗಲೇ ಆಗಮಿಸಿರುವ ಕ್ಯಾಬ್,ಆಟೋ ಚಾಲಕರು ಧರಣಿಯನ್ನು ಮುಂದುವರಿಸಿದ್ದಾರೆ.ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗುತ್ತಿದ್ದಾರೆ. ಒಂದು ವೇಳೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟದ ಎಚ್ಚರಿಕೆಯನ್ನು ಪ್ರತಿಭಟನಾಕಾರರು ನೀಡುತ್ತಿದ್ದಾರೆ. ಮಧ್ಯಾಹ್ನ 12.30ಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರ ಮನವಿಯನ್ನು ಸ್ವೀಕರಿಸಲಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.