ಮಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ರಂಗೇರಿದ್ದು, ಎಲ್ಲ ಪಕ್ಷಗಳು ತಮ್ಮದೇ ಆದ ಸಿದ್ದತೆ ಮಾಡ್ತಿವೆ, ಈ ಚುನಾವಣೆ ಸಂದರ್ಭದಲ್ಲೇ ಬಿಜೆಪಿ ಶಾಸಕರೊಬ್ಬರು ಮಹಿಳೆ ಜೊತೆ ಇರುವ ಅಶ್ಲೀಲ ಫೋಟೋಗಳು ವೈರಲ್ ಆಗಿವೆ.
ಮಹಿಳೆಯೊಂದಿಗಿನ ಫೋಟೋವನ್ನು ಅಲ್ಲಗೆಳೆದಿದ್ದು, ನನ್ನ ಫೋಟೋವನ್ನು ಎಡಿಟ್ ಮಾಡಿ ವೈರಲ್ ಮಾಡಿದ್ದಾರೆ ಎಂದಿದ್ದಾರೆ. ಇನ್ನು ಈ ಬಗ್ಗೆ ಅವರು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನನ್ನ ಫೋಟೋವನ್ನು ಯಾರೋ ಎಡಿಟ್ ಮಾಡಿ ವೈರಲ್ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದು, ಇದೀಗ ಈ ಫೋಟೋವನ್ನು ವೈರಲ್ ಮಾಡುತ್ತಿರುವವ ವಿರುದ್ಧ ಕ್ರಮಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ.
ಪುತ್ತೂರು ಬಿಜೆಪಿ ಟಿಕೆಟ್ಗಾಗಿ ಭರ್ಜರಿ ಫೈಟ್ ನಡೆದಿದ್ದು, ಹಾಲಿ ಶಾಸಕ ಸಂಜೀವ ಮಠಂದೂರು ಫೋಟೋ ವೈರಲ್ ಆಗಿದೆ.ತನ್ನನ್ನು ಮೂಲೆಗುಂಪು ಮಾಡುವ ಪಿತೂರಿಯ ಭಾಗವಾಗಿ ಫೋಟೊಗಳನ್ನು ಎಡಿಟ್ ಮಾಡಿ ವೈರಲ್ ಮಾಡಲಾಗಿದೆ ಎಂದು ಮಠಂದೂರು ಹೇಳಿದ್ದಾರೆ. ಅವರು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಫೋಟೊಗಳನ್ನು ವೈರಲ್ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.