Sunday, September 24, 2023
spot_img
- Advertisement -spot_img

ದೊಡ್ಡನಗೌಡ ಪಾಟೀಲ್ ಸಂಪೂರ್ಣ ಮಾಹಿತಿ

ದೊಡ್ಡನಗೌಡ ಪಾಟೀಲ್ ರಾಜ್ಯದ ಪ್ರಮುಖ ರಾಜಕಾರಣಿಗಳಲ್ಲಿ ಒಬ್ಬರು. ಪ್ರಸ್ತುತ ಕೊಪ್ಪಳ ಜಿಲ್ಲೆ ಕುಷ್ಟಗಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಬಾಲ್ಯ ಹಾಗೂ ವೃತ್ತಿ ಜೀವನ : ದೊಡ್ಡನಗೌಡ ಪಾಟೀಲ್ ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಕೊರಡಕೇರ ಗ್ರಾಮದಲ್ಲಿ ಹನಮಗೌಡ ಪಾಟೀಲ ಹನಮವ್ವ ದಂಪತಿಗಳ ಪುತ್ರನಾಗಿ ಜೂನ್ 1, 1973ರಂದು ಜನಸಿದರು. ಆರಂಭಿಕ ಶಿಕ್ಷಣವನ್ನು ಕೊರಡಕೇರ ಗ್ರಾಮದಲ್ಲಿ ಪೂರೈಸಿದ ಪಾಟೀಲರು, ನಂತರ ಕುಷ್ಟಗಿ ಸರ್ಕಾರಿ ಪಿಯು ಕಾಲೇಜಿನಲ್ಲಿ ಪಿಯುಸಿ ಶಿಕ್ಷಣ ಮುಗಿಸಿದರು. ದೊಡ್ಡನಗೌಡ ಅವರು ಲಕ್ಷೀದೇವಿ ಎಂಬವರನ್ನು ವಿವಾಹವಾಗಿದ್ದು, ದಂಪತಿಗೆ ಹನಮಗೌಡ, ಅಮರೇಗೌಡ, ಶ್ರೀಗೌರಿ ಎಂಬ ಮೂವರು ಮಕ್ಕಳಿದ್ದಾರೆ.

ದೊಡ್ಡನಗೌಡ ಪಾಟೀಲರ ತಂದೆ ಹನಮಗೌಡ ಅವರು ಆರಂಭದಿಂದಲೂ ರಾಜಕೀಯದಲ್ಲಿ ತೊಡಗಿಸಿಕೊಂಡಿದ್ದರು. ಕುಷ್ಟಗಿ ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಚುನಾವಣೆಗೆ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದರು.

ರಾಜಕೀಯ ಹಿನ್ನೆಲೆ :

2001ರಲ್ಲಿ ಕೊರಡಕೇರಾ ಜಿ.ಪಂ ಸದಸ್ಯರಾಗಿ ಸೇವೆ
2004 ರ ಚುನಾವಣೆಯಲ್ಲಿ ಪ್ರಥಮ ಬಾರಿಗೆ ಕುಷ್ಟಗಿ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆ
2008 ರ ಚುನಾವಣೆಯಲ್ಲಿ ಸ್ಪರ್ಧಿಸಿ ಪರಾಭವಗೊಂಡಿದ್ದರು. ಕುರಿ ಮತ್ತು ಉಣ್ಣೆ ನಿಗಮದ ಅಧ್ಯಕ್ಷರಾಗಿದ್ದರು
2009 ರಲ್ಲಿ ಎರಡನೇ ಬಾರಿಗೆ ಬಿಜೆಪಿ ಕುಷ್ಟಗಿ ಮಂಡಲದ ಅಧ್ಯಕ್ಷರಾಗಿ ಸೇವೆ
2013ರ 2ನೇ ಬಾರಿಗೆ ಶಾಸಕರಾಗಿ ಆಯ್ಕೆ
2018ರ ಚುನಾವಣೆಯಲ್ಲಿ ಕಾಂಗ್ರೆಸ್ ನ ಅಮರೇಗೌಡ ಬಯ್ಯಾಪುರ ವಿರುದ್ದ ಸೋಲು
ಪ್ರಸ್ತುತ ಭಾರತೀಯ ಜನತಾ ಪಾರ್ಟಿಯ ಜಿಲ್ಲಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
2013ರ ಚುನಾವಣೆಯಲ್ಲಿ ಮೂರನೇ ಬಾರಿಗೆ ಬಿಜೆಪಿಯಿಂದ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದಾರೆ

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles