ತುಮಕೂರು: ಪ್ರಚಾರದ ನೆಪದಲ್ಲಿ ಮಹಿಳೆಯರನ್ನು JDS ಅಭ್ಯರ್ಥಿ ಎನ್. ಗೋವಿಂದರಾಜು ಮಂಚಕ್ಕೆ ಕರೆದಿದ್ದಾರೆ ಎಂದು ಆರೋಪಿಸಿ ಮಹಿಳೆಯರು ಪ್ರತಿಭಟಿಸಿದ್ದಾರೆ. ತುಮಕೂರಿನ ನಗರ ವೃತ್ತದಲ್ಲಿ 5 ಸಾವಿರಕ್ಕೂ ಹೆಚ್ಚು ಮಹಿಳೆಯರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗೋ ಬ್ಯಾಕ್ ಗೋವಿಂದರಾಜು ಎಂದು ಘೋಷಣೆ ಕೂಗಿದ್ದು, ಜೆಡಿಎಸ್‌ನಿಂದ ಬಿ ಫಾರಂ ಕೊಡದಂತೆ ಆಗ್ರಹ ಮಾಡಿದ್ದಾರೆ. ಜೊತೆಗೆ ಜೆಡಿಎಸ್‌ಗೆ ಹೆಣ್ಣು ಮಕ್ಕಳ ಮೇಲೆ ಗೌರವ ಇದ್ದರೆ JDS ಪಕ್ಷದಿಂದ ವಜಾಗೊಳಿಸಿ ಎಂದು ಸವಾಲು ಹಾಕಿದ್ದಾರೆ.
ಅಸಭ್ಯವಾಗಿ ನಡೆದುಕೊಂಡ ಬಗ್ಗೆ ರೇಷ್ಮಾ ಎಂಬ ಮಹಿಳೆ ದೂರು ನೀಡಿದ್ದಾರೆ. ಜೊತೆಗೆ ಗೋವಿಂದರಾಜು ಮಾತನಾಡಿರುವ ಪೋಲಿ ಆಡಿಯೋ ಬಿಡುಗಡೆಯಾಗಿತ್ತು. ರೇಷ್ಮಾ ಆಡಿಯೋ ಸಾಕ್ಷ್ಯಗಳನ್ನು ಒದಗಿಸಿದಲ್ಲದೆ, ಕುವೆಂಪು ನಗರದಲ್ಲಿರುವ ಎನ್. ಗೋವಿಂದರಾಜು ಮನೆ ಮುಂದೆ ಗಲಾಟೆ ಕೂಡ ಮಾಡಿದ್ದಾರೆ.
ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ಅವರು ಚುನಾವಣಾ ಪ್ರಚಾರಕ್ಕೆ ಮಹಿಳೆಯರನ್ನು ಕರೆಸುವ ನೆಪದಲ್ಲಿ ಲೈಂಗಿಕವಾಗಿ ಬಳಸಿಕೊಳ್ಳಲು ಪ್ರಯತ್ನಿಸಿದ್ದಾರೆ , ಹೀಗಾಗಿ ಆ ಕಾಮುಕನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.