ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಹುಲ್ಲೇಮನೆಯಲ್ಲಿ ಮಹಿಳೆಯೊಬ್ಬರು ಕಾಡಾನೆ ದಾಳಿಗೆ ಒಳಗಾಗಿ ಮೃತಪಟ್ಟಿದ್ದಾರೆ. ಕಾಡಾನೆಯಿಂದ ಮಹಿಳೆ ಸಾವಿಗೀಡಾದ ಪ್ರದೇಶಕ್ಕೆ ತೆರಳಿದ್ದ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಮೇಲೆ ಗುಂಪೊಂದು ದಾಳಿ ನಡೆಸಿದ್ದು, ಬಟ್ಟೆ ಹರಿದು ಹಾಕಿದೆ.
ಬೇಕು ಅಂತ ಗುಂಪುಗೂಡಿ ಹಲ್ಲೆ ಮಾಡಿದ್ದಾರೆ. ನಾನು ಅಲ್ಲೇ ಇರುತ್ತಿದ್ದೆ, ನನ್ನನ್ನು ಪೊಲೀಸರು ಮಿಸ್ಗೈಡ್ ಮಾಡಿ ಹೊರಗೆ ಕಳಿಸಿದ್ದರು ಎಂದಿರುವ ಶಾಸಕರು, ಪೊಲೀಸರ ವೈಫಲ್ಯ ಎಂದೂ ಹೇಳಿದ್ದಾರೆ. ಅಲ್ಲಿಂದ ಕೊನೆಗೂ ಅವರನ್ನು ಹರಸಾಹಸಪಟ್ಟು ಪೊಲೀಸರು ರಕ್ಷಿಸಿ ಕರೆದೊಯ್ದಿದ್ದಾರೆ.ನಡೆದ ಘಟನೆ ಬಗ್ಗೆ ಶಾಸಕ ಕುಮಾರಸ್ವಾಮಿ ಹರಿದ ಬಟ್ಟೆಯಲ್ಲಿ ಹೇಳಿಕೆ ನೀಡಿದ್ದಾರೆ.
ಕೋರ್ಟ್, ಸರ್ಕಾರ ಏನು ಹೇಳುತ್ತದೆ ಎನ್ನುವುದು ರಾಜ್ಯಕ್ಕೆ-ದೇಶಕ್ಕೆ ಗೊತ್ತಿದೆ. ಅದಾಗ್ಯೂ ಸಂಚು ಮಾಡಿ ಹಲ್ಲೆ ಮಾಡಲಾಗಿದೆ. ಸಾರ್ವಜನಿಕರ ಸೇವೆ ಮಾಡುವವರು ಎಲ್ಲ ತಾಗ್ಯಕ್ಕೂ ಸಜ್ಜಾಗಿರ್ತೀವಿ ಎಂದೂ ಹೇಳಿದ್ದಾರೆ.