Thursday, September 28, 2023
spot_img
- Advertisement -spot_img

Puneeth Kerehalli : ಪುನೀತ್ ಕೆರೆಹಳ್ಳಿ ಮೇಲಿನ ಗೂಂಡಾ ಕಾಯ್ದೆ ರದ್ದು: ಜೈಲಿನಿಂದ ಬಿಡುಗಡೆ!

ಬೆಂಗಳೂರು: ರಾಷ್ಟ್ರ ರಕ್ಷಣಾ ಪಡೆ ಅಧ್ಯಕ್ಷ ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ದಾಖಲಿಸಿದ್ದ ಪ್ರಕರಣವನ್ನು ರದ್ದುಪಡಿಸಿ, ಜೈಲಿನಿಂದ ಬಿಡುಗಡೆ ಮಾಡಲಾಗಿದೆ.

ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಕೆರೆಹಳ್ಳಿಯ ಪುನೀತ್, ಬೆಂಗಳೂರಿನಲ ಜೆಪಿ ನಗರ 7ನೇ ಹಂತದಲ್ಲಿ ವಾಸವಿದ್ದರು. ಅವರ ವಿರುದ್ಧ ರಾಜ್ಯದ 11 ಠಾಣೆಗಳಲ್ಲಿ ಎಫ್ಐಆರ್ ದಾಖಲಾಗಿತ್ತು. ಕೆಲವು ಪ್ರಕರಣಗಳಲ್ಲಿ ಶಿಕ್ಷೆಯೂ ಆಗಿತ್ತು.

ಇದನ್ನೂ ಓದಿ : ತಮಿಳುನಾಡಿಗೆ ನೀರು ಬಿಡಲ್ಲ : ಖಾಲಿ ಬಿಂದಿಗೆ ಹಿಡಿದು ವಾಟಾಳ್‌ ಪ್ರತಿಭಟನೆ

ಅಪರಾಧ ಪ್ರಕರಣಗಳಲ್ಲಿ ಪದೆ ಪದೆ ಭಾಗಿಯಾಗುತ್ತಿರುವುದರಿಂದ ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು. ಅವರನ್ನು ಬಂಧಿಸುವಂತೆ ಕಮಿಷನರ್ ಆದೇಶ ಹೊರಡಿಸಿದ್ದರಿಂದ, ಅವರನ್ನು ಬಂಧಿಸಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿತ್ತು.

ಬಂಧನ ಆದೇಶವನ್ನು ಪುನೀತ್ ಪ್ರಶ್ನಿಸಿದ್ದರು. ಇದರ ವಿಚಾರಣೆಗಾಗಿ ಸರ್ಕಾರ ಸಲಹಾ ಸಮಿತಿಯನ್ನು ರಚಿಸಿತ್ತು. ವಿಚಾರಣೆ ನಡೆಸಿದ್ದ ಸಮಿತಿ, ‘ಅವರನ್ನು ಬಂಧನದಲ್ಲಿಡಲು ಸಾಕಷ್ಟು ಕಾರಣಗಳಿಲ್ಲ’ ಎಂದು ಅಭಿಪ್ರಾಯಪಟ್ಟು ವರದಿ ನೀಡಿದೆ.

ಈ ಹಿನ್ನೆಲೆಯಲ್ಲಿ ವರದಿಯನ್ವಯ ಆದೇಶ ಹೊರಡಿಸಿರುವ ಸರ್ಕಾರ, ಕಮಿಷನರ್ ಆದೇಶವನ್ನು ರದ್ದುಪಡಿಸಿದೆ. ಪುನೀತ್ ಅವರನ್ನು ಬಂಧನ ಮುಕ್ತಗೊಳಿಸುವಂತೆ ಸೂಚಿಸಿದೆ. ಇದರ ಬೆನ್ನಲ್ಲೇ ಪುನೀತ್‌ನನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ.
ಗೂಂಡಾ ಕಾಯ್ದೆಯಡಿ ದಾಖಲಾದ ಪ್ರಕರಣವನ್ನು ರದ್ದುಪಡಿಸಿದ ಮೊದಲ ಪ್ರಕರಣ ಇದಾಗಿದೆ.

ಇದನ್ನೂ ಓದಿ : ನಮ್ಮ ಸರ್ಕಾರ ಟೇಕಾಫ್ ಆಗಿದೆ, ಒಳ್ಳೆಯ ನಿರ್ಧಾರ ಅಷ್ಟೇ ತೆಗೆದುಕೊಳ್ಳುತ್ತೆ : ಈಶ್ವರ್ ಖಂಡ್ರೆ

ಗೂಂಡಾ ಕಾಯ್ದೆ ಜಾರಿ ಬಗ್ಗೆ ಪೊಲೀಸರಿಗೆ ನೋಟಿಸ್‌ ನೀಡಿದ ಹೈಕೋರ್ಟ್

ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್‌ಕುಮಾರ್‌ ಅಲಿಯಾಸ್‌ ಪುನೀತ್‌ ಕೆರೆಹಳ್ಳಿಯನ್ನು ಗೂಂಡಾ ಕಾಯ್ದೆಯಡಿ ಬಂಧಿಸಿರುವ ಸಂಬಂಧ ರಾಜ್ಯ ಸರ್ಕಾರ, ನಗರ ಪೊಲೀಸ್‌ ಆಯುಕ್ತರು ಮತ್ತು ಸಿಸಿಬಿ ಪೊಲೀಸರಿಗೆ ಆಗಸ್ಟ್ 24ರಂದು ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿತ್ತು.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles