ಬೆಂಗಳೂರು : ಪವರ್ಸ್ಟಾರ್ ಪುನೀತ್ ರಾಜ್‍ಕುಮಾರ್ ಹುಟ್ಟು ಹಬ್ಬದ ಹಿನ್ನಲೆ ರಾಜಕಾರಣಿಗಳು, ಸಿನೆಮಾಗಣ್ಯರು ಅಪ್ಪುರಿಗೆ ಪ್ರೀತಿಯ ಶುಭಾಶಯ ಕೋರಿದ್ದಾರೆ. ಪ್ರೀತಿಯ ರಾಜಕುಮಾರನಿಗೆ ಕರ್ನಾಟಕದ ಸಿಎಂ ಬಸವರಾಜ ಬೊಮ್ಮಾಯಿ ಟ್ವಿಟ್ಟರ್ ನಲ್ಲಿ ಹುಟ್ಟು ಹಬ್ಬಕ್ಕೆ ಶುಭ ಕೋರಿದ್ದಾರೆ. ಜೊತೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಕೂಡಾ ಟ್ವೀಟ್ ಮಾಡಿ ಶುಭ ಕೋರಿದ್ದಾರೆ.
ಪುನೀತ್ ರಾಜ್ ಕುಮಾರ್ ಇಲ್ಲದೇ ಕರುನಾಡು ಕಂಗಾಲಾಗಿದೆ. ಪುನೀತ್ ಹೆಸರಿನಲ್ಲಿ ಅಭಿಮಾನಿಗಳು ಸಾಮಾಜಿಕ ಕಾರ್ಯ ಕೈಗೊಂಡಿದ್ದಾರೆ. ಸಮಾಧಿ ಬಳಿ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುತ್ತಿದ್ದಾರೆ. ಹುಟ್ಟು ಹಬ್ಬ ಹಿನ್ನೆಲೆ ಮಧ್ಯರಾತ್ರಿ ಕೇಕ್ ಕತ್ತರಿಸಿ ಅಭಿಮಾನಿಗಳು ಅಪ್ಪು ಬರ್ತಡೇ ಸೆಲಬ್ರೇಟ್ ಮಾಡಿದ್ದಾರೆ. ಪಟಾಕಿ ಸಿಡಿಸಿ ಹುಟ್ಟುಹಬ್ಬ ಆಚರಣೆ ಮಾಡಿದ ಅಭಿಮಾನಿಗಳು ಪವರ್ಸ್ಟಾರ್ನ್ನು ನೆನಪಿಸಿಕೊಂಡಿದ್ದಾರೆ.
ಮಧ್ಯರಾತ್ರಿಯಿಂದಲೇ ಕಂಠೀರವ ಸ್ಟುಡಿಯೋ ಬಳಿ ಅಪ್ಪು ಅಭಿಮಾನಿಗಳು ಬರುತ್ತಿದ್ದಾರೆ. ಸಮಾಧಿ ಬಳಿ ಬಿಗಿಪೊಲೀಸ್ ಬಂದೋಬಸ್ತ್ ಕೂಡಾ ಮಾಡಲಾಗಿದೆ. ರಾಜ್ಯದ ನಾನಾ ಕಡೆಗಳಲ್ಲಿ ಅಪ್ಪು ಪುತ್ಥಳಿ ಅನಾವರಣ, ಅನ್ನ ಸಂತರ್ಪಣೆ, ಅನಾಥಾಶ್ರಮದಲ್ಲಿ ಹುಟ್ಟು ಹಬ್ಬ ಸೇರಿ ಸಾಕಷ್ಟು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.