Thursday, September 28, 2023
spot_img
- Advertisement -spot_img

ಸಿ.ಪುಟ್ಟರಂಗಶೆಟ್ಟಿ ಸಂಪೂರ್ಣ ಮಾಹಿತಿ

ಸಿ. ಪುಟ್ಟರಂಗಶೆಟ್ಟಿ ರಾಜಕೀಯ ರಂಗದಲ್ಲಿ ಪ್ರಖ್ಯಾತಿಯಾದ ಹೆಸರು, ಪ್ರಸ್ತುತ ಚಾಮರಾಜನಗರ ಕ್ಷೇತ್ರದ ಶಾಸಕರಾಗಿದ್ದಾರೆ. ಇವರು 2008 ರಲ್ಲಿ ಚಾಮರಾಜನಗರ ಕ್ಷೇತ್ರದಿಂದ ರಾಜಕೀಯ ಪ್ರವೇಶಿಸಿದರು. 2018ರ ವಿಧಾನಸಭಾ ಚುನಾವಣೆಯಲ್ಲಿ ಚಾಮರಾಜನಗರ ಕ್ಷೇತ್ರದಲ್ಲಿ ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಕೆ.ಆರ್. ಮಲ್ಲಿಕಾರ್ಜುನಪ್ಪ ಅವರನ್ನು 4913 ಮತಗಳ ಅಂತರದಿಂದ ಸೋಲಿಸಿ ಶಾಸಕರಾದರು.

2018 ಎಚ್.ಡಿ. ಕುಮಾರಸ್ವಾಮಿ ಮಂತ್ರಿಮಂಡಲದಲ್ಲಿ ಕ್ಯಾಬಿನೆಟ್ ದರ್ಜೆ ಸಚಿವರಾಗಿ ನೇಮಕವಾದರು. 2013 ಚಾಮರಾಜನಗರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿ ಶಾಸಕರಾದರು. 2008 ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿ ಶಾಸಕರಾಗಿ ಚುನಾಯಿತರಾದರು. ಚಾಮರಾಜನಗರ ಕ್ಷೇತ್ರಕ್ಕೆ ಕರ್ನಾಟಕ ವಿಧಾನಸಭೆಯ ಸದಸ್ಯರಾಗಿದ್ದಾರೆ. ಅಷ್ಟೇ ಅಲ್ಲದೇ ಕಾಂಗ್ರೆಸ್-ಜನತಾ ದಳ (ಎಸ್) ಸಮ್ಮಿಶ್ರ ಸರ್ಕಾರದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.

ಬಾಲ್ಯ ಜೀವನ :

ಚಾಮರಾಜನಗರ ಕ್ಷೇತ್ರದಿಂದ ರಾಜಕೀಯ ಪ್ರವೇಶಿಸಿದರು. ಇವರ ತಂದೆ ಚಮ್ಮಾಶೆಟ್ಟಿ, ಉಪ್ಪಾರ ಸಮುದಾಯದ ಪುಟ್ಟರಂಗಶೆಟ್ಟಿ ಹುಟ್ಟಿದ್ದು ನವೆಂಬರ್‌ 31, 1954, ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನಲ್ಲಿ, 2008ರಲ್ಲಿ ರಾಜಕೀಯ ಪ್ರವೇಶ ಮಾಡಿದ ಪುಟ್ಟರಂಗಶೆಟ್ಟಿ ಕೊಳ್ಳೇಗಾಲ ಮಹದೇಶ್ವರ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆದಿದ್ದಾರೆ.

ರಾಜಕೀಯ ಜೀವನ :

2008ರಲ್ಲಿ ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದ ಪುಟ್ಟರಂಗಶೆಟ್ಟಿ, 2013 ರಲ್ಲಿ‌ಮತ್ತೊಮ್ಮೆ ಚಾಮರಾಜನಗರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾದರು. ಎರಡು ಸಾವಿರದ ಹದಿನೆಂಟರಲ್ಲಿ ಚಾಮರಾಜನಗರ ಕ್ಷೇತ್ರದಿಂದ ಶಾಸಕರಾಗಿ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದು2023 ರಲ್ಲಿ ಸತತ ನಾಲ್ಕನೇ ಬಾರಿಗೆ ಚಾಮರಾಜನಗರ ಕ್ಷೇತ್ರದಿಂದ ಸ್ಪರ್ಧಿಸಿ ಉಸ್ತುವಾರಿ ಸಚಿವರಾಗಿದ್ದ ಪ್ರಭಾವಿ ಸಮುದಾಯದ ಸೋಮಣ್ಣ ಅವರ ವಿರುದ್ದ ಶಾಸಕರಾಗಿ ಆಯ್ಕೆಯಾದರು. 2018/19ರಲ್ಲಿ ಸಮ್ಮಿಶ್ರ ಸರ್ಕಾರದ ಆಡಳಿತದಲ್ಲಿದ್ದ ಹೆಚ್‌.ಡಿ ಕುಮಾರಸ್ವಾಮಿ ಅವರ ಕ್ಯಾಬಿನೆಟ್ ನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾಗಿ ಸೇವೆ ಸಲ್ಲಿಸಿದ ಪುಟ್ಟರಂಗಶೆಟ್ಟಿ, 2023ರಲ್ಲಿ ಉಪ ಸಭಾಪತಿಯಾಗಿ ಆಯ್ಕೆಯಾದರು.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles