Wednesday, May 31, 2023
spot_img
- Advertisement -spot_img

ನಾನಿನ್ನೂ ಉಪಸಭಾಧ್ಯಕ್ಷ ಸ್ಥಾನ ವಹಿಸಿಕೊಳ್ಳಲು ತೀರ್ಮಾನಿಸಿಲ್ಲ : ಶಾಸಕ ಪುಟ್ಟರಂಗಶೆಟ್ಟಿ

ಬೆಂಗಳೂರು: ಮಂತ್ರಿ ಮಂಡಲದಲ್ಲಿ ಸಚಿವ ಸ್ಥಾನ ನೀಡಿದ್ದರೆ ಚೆನ್ನಾಗಿತ್ತು. ನಾನು ಶಾಸಕನಾಗಿಯೇ ಇರುತ್ತೇನೆ ಎಂದು ಶಾಸಕ ಪುಟ್ಟರಂಗಶೆಟ್ಟಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ಈ ಬಗ್ಗೆ ಪಕ್ಷದ ಹಿರಿಯ ನಾಯಕರೊಂದಿಗೆ ಚರ್ಚಿಸಲಾಗುವುದು. ಸಚಿವ ಸ್ಥಾನ ಯಾಕೆ ಸಿಕ್ಕಿಲ್ಲ ಎಂಬುದರ ಬಗ್ಗೆ ನನಗೆ ಗೊತ್ತಿಲ್ಲ ಎಂದು ಅಭಿಪ್ರಾಯಪಟ್ಟರು. ಉಪಸಭಾಧ್ಯಕ್ಷ ಸ್ಥಾನ ಎಂದು ಹೇಳಿದ್ದಾರೆ. ಆದರೆ ನಾನಿನ್ನೂ ಉಪಸಭಾಧ್ಯಕ್ಷ ಸ್ಥಾನ ವಹಿಸಿಕೊಳ್ಳಲು ತೀರ್ಮಾನಿಸಿಲ್ಲ ಎಂದರು.

ಡೆಪ್ಯುಟಿ ಸ್ಪೀಕರ್​ ಸ್ಥಾನ ನಾನು ಬೇಡ ಎಂದಿದ್ದೇನೆ. ನನ್ನ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ದಾವಣಗೆರೆ, ಶಿವಮೊಗ್ಗ, ಬಳ್ಳಾರಿ ಸೇರಿದಂತೆ ಇತರ ಜಿಲ್ಲೆಗಳಿಂದ ಬಂದಿದ್ದ ಜನರು ನಿನ್ನೆಯೇ ವಾಪಸ್ ಹೊರಟು ಹೋದರು.

ಸಿದ್ದರಾಮಯ್ಯ ಒತ್ತಾಯಕ್ಕೆ ಡೆಪ್ಯುಟಿ ಸ್ಪೀಕರ್​ ಸ್ಥಾನ ಪಡೆಯಬೇಕಷ್ಟೇ” ಎಂದರು. ಶಾಸಕ ಸಿ.ಪುಟ್ಟರಂಗಶೆಟ್ಟಿಗೆ ಸಚಿವ ಸ್ಥಾನ ನೀಡಿದ್ದರೆ ಕಾಂಗ್ರೆಸ್ ಕಚೇರಿ ಮುಂದೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಅಭಿಮಾನಿಯೊನ್ನ ಪತ್ರ ಬರೆದಿದ್ದಾನೆ. ಈ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ನಲ್ಲೂರುಮೋಳೆಯ ಚಂದ್ರಶೇಖರ್ ಎಂಬ ಆಭಿಮಾನಿಯೊಬ್ಬ “ನಮ್ಮ ಉಪ್ಪಾರ ಸಮಾಜದ ಏಕೈಕ ಶಾಸಕ, ಸಿ.ಪುಟ್ಟರಂಗಶೆಟ್ಟಿಗೆ ಸಚಿವ ಸ್ಥಾನ ಕೊಡದಿದ್ದರೆ ಜಿಲ್ಲಾ ಅಥವಾ ಕೆಪಿಸಿಸಿ ಕಚೇರಿ ಮುಂದೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾನೆ.

Related Articles

- Advertisement -

Latest Articles