ಬೆಂಗಳೂರು: ಕರೆಂಟ್ ಬಿಲ್ ಕಟ್ಟಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರಿಗೆ ಅವಮಾನಿಸಬಾರದು ಎಂದು ಬಿಜೆಪಿ ಮಾಜಿ ಸಚಿವ ಆರ್.ಅಶೋಕ್ ಆಗ್ರಹಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಯಾರೊಬ್ಬರೂ ಕರೆಂಟ್ ಬಿಲ್ ಕಟ್ಟಬೇಡಿ. ಮಹಿಳೆಯರು ಬಸ್ನಲ್ಲಿ ಉಚಿತವಾಗಿ ಪ್ರಯಾಣಿಸಲಿ. ನಾನು ಕಟ್ಟಲ್ಲ, ನೀವೂ ಕಟ್ಟಬೇಡಿ ಎಂದು ಡಿಕೆಶಿ-ಸಿದ್ದರಾಮಯ್ಯ ಹೇಳಿದ್ದಾರೆ.ಹೀಗಾಗಿ ರಿಸ್ಕ್ ಬೇಡ ಎಂದು ಸಲಹೆ ನೀಡಿದರು.
ಕಾಂಗ್ರೆಸ್ ನುಡಿದಂತೆ ನಡೆಯಲಿದ್ದು, ಐದು ಉಚಿತ ಗ್ಯಾರಂಟಿಗಳನ್ನು ಕೊಡಲಿದೆ. ದಯವಿಟ್ಟು ಕಾಂಗ್ರೆಸ್ನವರು ಹೇಳಿದ್ದನ್ನು ಜನರು ಫಾಲೋ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಯಾರೊಬ್ಬರೂ ಕರೆಂಟ್ ಬಿಲ್ ಕಟ್ಟಬೇಡಿ. ಮಹಿಳೆಯರು ಬಸ್ನಲ್ಲಿ ಉಚಿತವಾಗಿ ಪ್ರಯಾಣಿಸಲಿ. ನಾನು ಕಟ್ಟಲ್ಲ, ನೀವೂ ಕಟ್ಟಬೇಡಿ ಎಂದು ಡಿಕೆಶಿ-ಸಿದ್ದರಾಮಯ್ಯ ಹೇಳಿದ್ದಾರೆ.
ಕಾಂಗ್ರೆಸ್ ಅಧಿಕಾರವಹಿಸಿಕೊಂಡ ನಂತರ ಮೊದಲ ಸಚಿವ ಸಂಪುಟ ಸಭೆಯಲ್ಲಿ ಐದು ಉಚಿತ ಗ್ಯಾರಂಟಿಗಳನ್ನು ಜಾರಿ ಮಾಡುವುದಾಗಿ ಘೋಷಿಸಿದ್ದರು.ಈಗ ಅದನ್ನು ಪಾಲಿಸಲೇಬೇಕು ಎಂದರು. ಅತ್ತೆ, ತಾಯಿ, ಮಾವನ ಮನೆಗೆ, ದೇವಸ್ಥಾನಕ್ಕೆ ಹೋಗಲು ಬಸ್ ಫ್ರೀ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಆದ್ರೆ ಈವರೆಗೆ ಯಾವುದೇ ನಿರ್ಧಾರವನ್ನು ಪ್ರಕಟಿಸಿಲ್ಲ. ಗ್ಯಾರಂಟಿ ಘೋಷಣೆ ಮಾಡುವಾಗ ಯೋಚನೆ ಮಾಡಿರಲಿಲ್ಲವಾ ಎಂದು ಪ್ರಶ್ನೆ ಮಾಡಿದರು.