ಬೆಂಗಳೂರು:ಬಸವರಾಜ ಬೊಮ್ಮಾಯಿ ಅವರು ಬಡವರ ಬಗ್ಗೆ ತಾಯಿಯ ಪ್ರೀತಿ ತೋರಿಸುತ್ತಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.
ಮಾಧ್ಯಮದವರೊಂದಿಗೆ ಮಾತನಾಡಿ, ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ತಾಯಿ ಪ್ರೀತಿಯ ಸರ್ಕಾರ ಎಂದು ಬಣ್ಣಿಸಿದರು. ಹಕ್ಕುಪತ್ರ ವಿತರಣಾ ಸಮಾರಂಭದಲ್ಲಿ ಮಾತನಾಡಿ, ಬಸವರಾಜ ಬೊಮ್ಮಾಯಿ 5 ಸಾವಿರ ಜನರಿಗೆ ಹಕ್ಕುಪತ್ರ ವಿತರಿಸಿದ್ದು, ಇನ್ನೂ ಒಂದು ಲಕ್ಷ ಜನರಿಗೆ ಶೀಘ್ರದಲ್ಲೇ ಹಕ್ಕುಪತ್ರ ನೀಡಲಾಗುವುದು. ಸರ್ಕಾರದ ಸವಲತ್ತುಗಳನ್ನು ಮನೆಯ ಬಾಗಿಲಿಗೇ ತಲುಪಿಸುವ ಕ್ರಾಂತಿಕಾರಕ ಬದಲಾವಣೆಯನ್ನು ಸರ್ಕಾರ ತಂದಿದೆ. ಶೀಘ್ರದಲ್ಲೇ ಇನ್ನೂ ಒಂದು ಲಕ್ಷ ಜನರಿಗೆ ಹಕ್ಕುಪತ್ರ ವಿತರಿಸಲಾಗುವುದು ಎಂದು ಹೇಳಿದ್ದಾರೆ.
ಬಸವರಾಜ ಬೊಮ್ಮಾಯಿ ಕಾಮನ್ ಸಿಎಂ, ಬಡವರ ಶ್ರೇಯೋಭಿವೃದ್ಧಿಗಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಮಕೃಷ್ಣ ಹೆಗಡೆಯವರ ನಂತರ ಸಚಿವರಿಗೆ ಪೂರ್ಣ ಸ್ವಾತಂತ್ರ್ಯ ನೀಡಿರುವುದು ಬಸವರಾಜ ಬೊಮ್ಮಾಯಿ ಅವರು ಮಾತ್ರ ಎಂದು ಪ್ರಶಂಸಿಸಿದರು. ಗೋವುಗಳ ದತ್ತು ಸ್ವೀಕಾರ ಮಾ.23ರಂದು ನಡೆಯಲಿದ್ದು, ಸಿಎಂ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.