ಹಾವೇರಿ: ಈ ಬಾರಿ ಕಾಂಗ್ರೆಸ್ ಗೆಲ್ಲುತ್ತೆ, ರಾಹುಲ್ ಗಾಂಧಿ ದೇಶದ ಪ್ರಧಾನಿಯಾಗ್ತಾರೆ, ಬಿಜೆಪಿ ಆಯಸ್ಸು ಆರು ತಿಂಗಳು ಮಾತ್ರ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಭಾರತ್ ಜೋಡೋ ಯಾತ್ರೆಯಿಂದ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ದೊಡ್ಡ ಪಾದಯಾತ್ರೆ ಮಾಡಿದ್ದೇವೆ, ಇಂಡಿಯಾ – ಭಾರತ್ ಹೆಸರು ಬದಲಾವಣೆ ಪ್ರಕ್ರಿಯೆ ಪ್ರಾರಂಭವಾಗಿದೆ, ಅಭಿವೃದ್ಧಿ ಕೆಲಸ ಮಾಡ್ದೆ, ಬಿಜೆಪಿ ಹುನ್ನಾರ ಶುರುಮಾಡಿದೆ ಎಂದು ವಾಗ್ದಾಳಿ ನಡೆಸಿದರು.
ಭ್ರಷ್ಟಾಚಾರ ಮತ್ತು ಕೊರೋನಾ ಕಮೀಟಿ ರಚಿಸಿ ತನಿಖೆಗೆ ನೀಡಿದ್ದೇವೆ, ಇದರಿಂದ ಬಿಜೆಪಿ ನಾಯಕರಿಗೆ ಭಯ ಶುರುವಾಗಿದೆ ಎಂದರು. ಸಚಿವ ಶಿವಾನಂದ ಪಾಟೀಲ್ ರೈತ ಆತ್ಮಹತ್ಯೆ ಕುರಿತು ಹೇಳಿಕೆ ವಿಚಾರವಾಗಿ ಮಾತನಾಡಿ, ಈಗಾಗಲೇ ನಮ್ಮ ಪಕ್ಷದ ಸಚಿವರು ಸ್ಪಷ್ಟನೆ ನೀಡಿದ್ದಾರೆ , ನಮ್ಮ ಕಾಂಗ್ರೆಸ್ ಸರ್ಕಾರ ರೈತ ಪರವಾಗಿರೋ ಸರ್ಕಾರ. ರೈತರಿಗಾಗಿ ವಿವಿಧ ಯೋಜನೆ ನಾವು ನೀಡಿದ್ದೇವೆ ಎಂದು ತಿಳಿಸಿದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.