ಬೆಳಗಾವಿ : ರಾಹುಲ್ ಗಾಂಧಿ ಪ್ರಕರಣವನ್ನು ವ್ಯಕ್ತಿಗತವಾಗಿ ನೋಡುತ್ತಿಲ್ಲ. ಆದರೆ, ರಾಜಕಾರಣಿಗಳು ಬಾಯಿಗೆ ಬಂದಂತೆ ಮಾತನಾಡುವ ಪ್ರವೃತ್ತಿಗೆ ಇದು ಎಚ್ಚರಿಕೆಯ ಗಂಟೆ ಎಂದಷ್ಟೇ ಹೇಳಬಲ್ಲೆ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದಾರೆ.
ರಾಹುಲ್ ಗಾಂಧಿ ಸಂಸತ್ ಸ್ಥಾನದಿಂದ ಅನರ್ಹಗೊಂಡಿರುವುದು ಕಾನೂನಿನ ಪ್ರಕ್ರಿಯೆ. ಹಾಗಾಗಿ ಈ ಬಗ್ಗೆ ಮಾತನಾಡುವುದಕ್ಕೆ ಏನು ಇಲ್ಲ ಎಂದು ಸಚಿವ ಅಶ್ವತ್ಥ್ ನಾರಾಯಣ್ ಪ್ರತಿಕ್ರಿಯಿಸಿದ್ದಾರೆ. ಮಾನಹಾನಿ ಪ್ರಕರಣದಲ್ಲಿ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ, ಇದರಿಂದ ಕಾಂಗ್ರೆಸ್ ನಾಯಕರು, ಬೆಂಬಲಿಗರು ಪ್ರತಿಭಟನೆ ಹಾದಿ ತುಳಿದಿದ್ದು, ಪೊಲೀಸರು ಅಲ್ಲಿ ಇದ್ದು ಎಲ್ಲರನ್ನೂ ಚದುರಿಸಿದ್ದಾರೆ.
2019ರಲ್ಲಿನ ಮಾನಹಾನಿ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರು ತಪ್ಪಿತಸ್ಥ ಎಂದು ಗುರುವಾರ ತೀರ್ಪು ನೀಡಿದ್ದ ಸೂರತ್ ನ್ಯಾಯಾಲಯ, ಅವರಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಜನಪ್ರತಿನಿಧಿ ಕಾಯ್ದೆ ಪ್ರಕಾರ 2 ಶಿಕ್ಷೆಗೆ ಗುರಿಯಾದ ಕಾರಣಕ್ಕೆ ರಾಹುಲ್ ಗಾಂಧಿಯವರು ಲೋಕಸಭೆ ಸದಸ್ಯತ್ವ ಕಳೆದುಕೊಂಡಿದ್ದಾರೆ.