Wednesday, March 22, 2023
spot_img
- Advertisement -spot_img

ಕೊರೋನಾ ಕೇಂದ್ರ ಸರ್ಕಾರಕ್ಕೆ ಒಂದು ನೆಪ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ

ಚಂಢೀಗಢ : ಭಾರತ್ ಜೋಡೋ ಯಾತ್ರೆಯನ್ನು ನಿಲ್ಲಿಸಲು ಕೇಂದ್ರ ಸರ್ಕಾರಕ್ಕೆ ಕೊರೊನಾ ಒಂದು ನೆಪ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಭಾರತ್ ಜೋಡೋ ಯಾತ್ರೆಯು ಕಾಶ್ಮೀರಕ್ಕೆ ಹೋಗುತ್ತದೆ. ಇದೀಗ ಕೇಂದ್ರ ಸರ್ಕಾರ ಭಾರತ್ ಜೋಡೋ ಯಾತ್ರೆ ನಿಲ್ಲಿಸಲು ಹೊಸ ಆಲೋಚನೆ ಮಾಡಿದೆ. ಕೋವಿಡ್ ಹರಡುತ್ತಿದೆ ಎಂದು ನನಗೆ ಪತ್ರ ಬರೆದಿದ್ದಾರೆ. ಯಾತ್ರೆಯನ್ನು ನಿಲ್ಲಿಸಿ ಎಂದು ಹೇಳಿದ್ದಾರೆ. ಯಾತ್ರೆಯನ್ನು ತಡೆಯಲು ನೆಪಗಳನ್ನು ಹುಡುಕುತ್ತಿದ್ದರು. ಇದೀಗ ಕೊರೊನಾ ಒಂದು ನೆಪವಾಗಿದೆ ಎಂದು ಕಿಡಿಕಾರಿದ್ದಾರೆ.

ಕೇಂದ್ರ ಸರ್ಕಾರ ಕೋವಿಡ್ ಹರಡುತ್ತಿದೆ, ಮಾಸ್ಕ್ ಧರಿಸಿ ಎಂದು ಹೇಳುತ್ತಿದೆ. ಇದೆಲ್ಲವೂ ಯಾತ್ರೆ ನಿಲ್ಲಿಸಲು ನೆಪಗಳಷ್ಟೇಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ರಾಜಸ್ಥಾನದ ಸಿಎಂ ಅಶೋಕ್ ಗೆಹ್ಲೋಟ್‍ಗೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಪತ್ರ ಬರೆದಿದ್ದರು.

ಪತ್ರದಲ್ಲಿ ಕೋವಿಡ್-19 ಪ್ರೋಟೋಕಾಲ್ ಅನ್ನು ಅನುಸರಿಸಲು ಸಾಧ್ಯವಾಗದಿದ್ದರೆ, ಸಾರ್ವಜನಿಕ ಆರೋಗ್ಯ ತುರ್ತುಪರಿಸ್ಥಿತಿಯನ್ನು ಗಮನಿಸಿ ರಾಷ್ಟ್ರೀಯ ಹಿತಾಸಕ್ತಿಯಿಂದ ಭಾರತ್ ಜೋಡೋ ಯಾತ್ರೆಯನ್ನು ಮುಂದೂಡಿ ಎಂದಿದ್ದರು.

Related Articles

- Advertisement -

Latest Articles