Wednesday, May 31, 2023
spot_img
- Advertisement -spot_img

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಜಾಮೀನು ಮಂಜೂರು

ಗಾಂಧಿನಗರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸೂರತ್‌ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ರಾಹುಲ್ ಗಾಂಧಿಗೆ ಕೊಂಚ ರಿಲೀಫ್ ಸಿಕ್ಕಿದೆ.

2019ರ ಲೋಕಸಭಾ ಚುನಾವಣೆಯ ಸಮಯದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್‌ ಕೋರ್ಟ್‌ ಗುರುವಾರ ಬೆಳಗ್ಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಕಳೆದ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕರ್ನಾಟಕದ ಕೋಲಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಓರ್ವ ಕಳ್ಳ ಎಂದು ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದ್ದರು.

ನೀರವ್ ಮೋದಿ , ಲಲಿತ್ ಮೋದಿ, ನರೇಂದ್ರ ಮೋದಿ ಇವರೆಲ್ಲರ ಸರ್‌ನೇಮ್ ಒಂದೇ ಆಗಿದ್ದು, ಈ ಎಲ್ಲಾ ಕಳ್ಳರು ದೇಶ ಲೂಟಿ ಮಾಡಿದ್ದಾರೆ ಎಂದು ರಾಹುಲ್ ತಮ್ಮ ಭಾಷಣದಲ್ಲಿ ಹರಿಹಾಯ್ದಿದ್ದರು. ಈ ಹೇಳಿಕೆ ಆಧರಿಸಿ ಬಿಜೆಪಿ ಶಾಸಕ ಮತ್ತು ಗುಜರಾತ್ ಮಾಜಿ ಸಚಿವ ಪೂರ್ಣೇಶ್ ಮೋದಿ ಕ್ರಿಮಿನಲ್‌ ಮಾನಹಾನಿ ದೂರು ದಾಖಲಿಸಿದ್ದರು. ಶಿಕ್ಷೆ ವಿಧಿಸಿದ ಬೆನ್ನಲ್ಲೇ ರಾಹುಲ್‌ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದು ಸೂರತ್‌ ಕೋರ್ಟ್‌ 30 ದಿನಗಳ ಜಾಮೀನು ಮಂಜೂರು ಮಾಡಿದೆ.

Related Articles

- Advertisement -

Latest Articles