Monday, December 11, 2023
spot_img
- Advertisement -spot_img

‘ಮೋದಿ, ಅಮಿತ್ ಶಾ ಕಾಂಗ್ರೆಸ್ ಶಾಸಕರನ್ನು ಖರೀದಿಸಲು ಸರ್ಕಾರ ಲೂಟಿ ಮಾಡ್ತಿದ್ದಾರೆ’

ಮಧ್ಯ ಪ್ರದೇಶ: ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ತಮ್ಮ ಪಕ್ಷದ ಶಾಸಕರನ್ನು ಖರೀದಿಸಲು ಸರ್ಕಾರ ಲೂಟಿ ಮಾಡ್ತಿದ್ದಾರೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮಂಗಳವಾರ ಆರೋಪಿಸಿದ್ದಾರೆ.

ವಿದಿಶಾದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, 2020 ರಲ್ಲಿ ಕಮಲ್ ನಾಥ್ ಸರ್ಕಾರದ ಪತನಕ್ಕೆ ಕಾರಣವಾದ 22 ಶಾಸಕರ ಬಂಡಾಯವನ್ನು ಉಲ್ಲೇಖಿಸಿ, ಜನಸಾಮಾನ್ಯರ ಧ್ವನಿಯನ್ನು ಬಿಜೆಪಿ “ತುಳಿಯುತ್ತಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ: ದೀಪಾವಳಿ ಮಾಲಿನ್ಯ ತಡೆಯುವಲ್ಲಿ ಗೆದ್ದ ಬೆಂಗಳೂರು: ಅತೀ ಕಡಿಮೆ ಮಾಲಿನ್ಯ ದಾಖಲು

2018 ರ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ, ಕಾಂಗ್ರೆಸ್ 114 ಸ್ಥಾನ ಗೆದ್ದ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಕಾಂಗ್ರೆಸ್ ಪಕ್ಷವು ಪಕ್ಷೇತರರ ಬೆಂಬಲವನ್ನು ಪಡೆದು ಸರ್ಕಾರವನ್ನು ರಚಿಸಿತು. ಆದರೆ, ಕಮಲ್ ನಾಥ್ ಮುಖ್ಯಮಂತ್ರಿಯಾದ 15 ತಿಂಗಳ ನಂತರ ಶಾಸಕರ ರಾಜೀನಾಮೆಯಿಂದ ಸರ್ಕಾರ ಪತನವಾಯಿತು. ನಂತರ, ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದಲ್ಲಿ ಬಿಜೆಪಿ (109 ಸ್ಥಾನಗಳು) ಸರ್ಕಾರವನ್ನು ರಚಿಸಿತು.

“ಐದು ವರ್ಷಗಳ ಹಿಂದೆ ನೀವೆಲ್ಲರೂ ಕಾಂಗ್ರೆಸ್ ಪಕ್ಷವನ್ನು ಸರ್ಕಾರಕ್ಕೆ ಆಯ್ಕೆ ಮಾಡಿದ್ದೀರಿ. ನೀವು ಬಿಜೆಪಿಯನ್ನು ಆಯ್ಕೆ ಮಾಡಿಲ್ಲ ಆದರೆ ಕಾಂಗ್ರೆಸ್ ಪಕ್ಷವನ್ನು ಆಯ್ಕೆ ಮಾಡಿದ್ದೀರಿ. ನಂತರ ಬಿಜೆಪಿ ನಾಯಕರು ನರೇಂದ್ರ ಮೋದಿ, ಶಿವರಾಜ್ ಸಿಂಗ್ ಚೌಹಾಣ್ ಮತ್ತು ಅಮಿತ್ ಶಾ – ಶಾಸಕರನ್ನು ಖರೀದಿಸಿ ಚುನಾಯಿತರನ್ನು ತಮ್ಮ ಬುಟ್ಟಿಗೆ ಬೀಳಿಸಿಕೊಂಡು ಸರ್ಕಾರ ರಚಿಸಿದರು ಎಂದರು.

ಇದನ್ನೂ ಓದಿ: ʼಯಡಿಯೂರಪ್ಪ ಮಗ ಎಂದು ವಿಜಯೇಂದ್ರಗೆ ಜವಾಬ್ದಾರಿ ಕೊಟ್ಟಿಲ್ಲʼ

“ಕೋಟ್ಯಂತರ ರೂಪಾಯಿ ನೀಡಿ ಕಾಂಗ್ರೆಸ್ ಪಕ್ಷದ ಶಾಸಕರನ್ನು ಖರೀದಿಸುವ ಮೂಲಕ, ನಿಮ್ಮ ನಿರ್ಧಾರ, ನಿಮ್ಮ ಹೃದಯದ ಧ್ವನಿಯನ್ನು ಬಿಜೆಪಿ ನಾಯಕರು ನಿಮಗೆ ಮೋಸ ಮಾಡಿದ್ದಾರೆ” ಎಂದು ಬಿಜೆಪಿ ವಿರುದ್ಧ ಗುಡುಗಿದ್ದಾರೆ.

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಬಿಜೆಪಿಯನ್ನು ಬಹಳ ಅಂತರದಿಂದ ಸೋಲಿಸುವ ಪ್ರತಿಜ್ಞೆಯನ್ನು ರಾಹುಲ್ ಗಾಂಧಿ ಮಾಡಿದ್ದಾರೆ.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles