ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೆಪ್ಟೆಂಬರ್ ನಲ್ಲಿ ಐದು ದಿನಗಳ ಕಾಲ ಯುರೋಪ್ ಪ್ರವಾಸ ಕೈಗೊಳ್ಳಲಿದ್ದು, ಪ್ಯಾರಿಸ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳನ್ನು ಉದೇಶಿಸಿ ಮಾತನಾಡಲಿದ್ದಾರೆ.
ಸೆಪ್ಟೆಂಬರ್ 9 ಮತ್ತು 10ರಂದು ನವದೆಹಲಿಯಲ್ಲಿ ಜಿ20 ಶೃಂಗಸಭೆ ನಡೆಯಲಿದ್ದು, ಈ ಸಂದರ್ಭದಲ್ಲೇ ರಾಹುಲ್ ವಿದೇಶ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.
ಮೂಲಗಳ ಪ್ರಕಾರ, ಸೆಪ್ಟೆಂಬರ್ 7ರಂದು ಬ್ರಸೆಲ್ಸ್‌ನಲ್ಲಿ ಯುರೋಪಿಯನ್ ಯೂನಿಯನ್ ಸದಸ್ಯರೊಂದಿಗಿನ ಸಭೆಯಲ್ಲಿ ರಾಹುಲ್ ಭಾಗವಹಿಸಲಿದ್ದಾರೆ. ಸೆಪ್ಟೆಂಬರ್ 8ರಂದು ಪ್ಯಾರಿಸ್ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಲಿದ್ದಾರೆ. ಸೆಪ್ಟೆಂಬರ್ 9 ರಂದು ಪ್ಯಾರಿಸ್‌ನಲ್ಲಿ ಫ್ರಾನ್ಸ್‌ನ ಕಾರ್ಮಿಕ ಒಕ್ಕೂಟದ ಸಭೆಯಲ್ಲಿ ಭಾಗವಹಿಸಲಿದ್ದಾರೆ. ನಂತರ, ನಾರ್ವೆಗೆ ಭೇಟಿ ನೀಡಲಿರುವ ರಾಹುಲ್ ಗಾಂಧಿ, ಸೆಪ್ಟೆಂಬರ್ 10 ರಂದು ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಇದನ್ನೂ ಓದಿ : ‘ಮನ್ ಕಿ ಬಾತ್’ ನಲ್ಲಿ ನಿವೃತ್ತ ಬಿಎಂಟಿಸಿ ಚಾಲಕನನ್ನು ಶ್ಲಾಘಿಸಿದ ಪ್ರಧಾನಿ ಮೋದಿ
ಈ ಹಿಂದೆ ಹಲವು ಬಾರಿ ರಾಹುಲ್ ಗಾಂಧಿ ವಿದೇಶ ಪ್ರವಾಸ ಕೈಗೊಂಡು ಅಲ್ಲಿನ ವಿವಿಗಳಲ್ಲಿ ಕೇಂದ್ರ ಸರ್ಕಾರವನ್ನು ಟೀಕಿಸಿದ್ದು ವಿವಾದಕ್ಕೆ ಕಾರಣವಾಗಿತ್ತು. ಬಿಜೆಪಿ ಮತ್ತು ಅದರ ಅಂಗ ಸಂಸ್ಥೆಗಳು ರಾಹುಲ್ ವಿದೇಶಿ ನೆಲದಲ್ಲಿ ಭಾರತವನ್ನು ದೂಷಿಸುತ್ತಿದ್ದಾರೆ ಎಂದು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿತ್ತು. ಈ ಬಾರಿ ಜಿ20 ಶೃಂಗಸಭೆಯ ಸಲುವಾಗಿ ಜಾಗತಿಕ ನಾಯಕರು ಭಾರತಕ್ಕೆ ಆಗಮಿಸುವ ವೇಳೆಯೇ ರಾಹುಲ್ ವಿದೇಶಕ್ಕೆ ಹೊರಟಿರುವುದು ಮಹತ್ವಪಡೆದುಕೊಂಡಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.