Wednesday, May 31, 2023
spot_img
- Advertisement -spot_img

ಬಿಎಂಟಿಸಿ ಬಸ್‍ನಲ್ಲಿ ರಾಹುಲ್ ಗಾಂಧಿ ಸಂಚಾರ

ಬೆಂಗಳೂರು: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬೆಂಗಳೂರಿನ ಬಿಎಂಟಿಸಿ ಬಸ್‍ನಲ್ಲಿ ಸಾಮಾನ್ಯ ನಾಗರಿಕರಂತೆ ಸೋಮವಾರ ಸಂಚರಿಸಿದ್ದು, ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ವೈರಲ್ ಆಗ್ತಿದೆ.

ಫುಡ್ ಡೆಲಿವರಿ ಬಾಯ್ ಜೊತೆ ದ್ವಿಚಕ್ರ ವಾಹನದಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಚರಿಸಿದ್ದರು. ಅನಂತರ ಡೆಲಿವರಿ ಬಾಯ್‌ ಗಳ ಜೊತೆ ಹೋಟೆಲ್‌ವೊಂದರಲ್ಲಿ ಸಂವಾದ ನಡೆಸಿದ್ದರು. ಅವರ ಜೊತೆ ಊಟ ಕೂಡ ಮಾಡಿದ್ದರು. ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೂ 2 ದಿನಗಳು ಬಾಕಿಯಿದ್ದು,ಎಲ್ಲ ಪಕ್ಷದ ನಾಯಕರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಈ ಮಧ್ಯೆ ಇಂದು ಬೆಳಗ್ಗೆ ರಾಹುಲ್ ಗಾಂಧಿ ಅವರು ಬಿಎಂಟಿಸಿ ಬಸ್‍ನಲ್ಲಿ ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಸಂಚಾರ ನಡೆಸಿದ್ದಾರೆ.

ಕನ್ನಿಂಗ್ ಹ್ಯಾಮ್ ರಸ್ತೆಯಿಂದ ರಾಮಮೂರ್ತಿ ನಗರ ಕಡೆ ಹೋಗುತ್ತಿದ್ದ ಬಸ್‌ನಲ್ಲಿ ರಾಹುಲ್ ಗಾಂಧಿ ಪ್ರಯಾಣ ಬೆಳೆಸಿದ್ದಾರೆ. ಈ ವೇಳೆ ಪ್ರಯಾಣಿಕರ ಜೊತೆ ಸಂವಾದ ನಡೆಸುತ್ತಲೇ ಸಾರ್ವಜನಿಕರಂತೆ ಬಸ್‍ನಲ್ಲಿ ಪ್ರಯಾಣಿಸಿದರು. ಸುಮಾರು 6 ಕಿಮೀಗೂ ಹೆಚ್ಚು ದೂರ ಬಸ್‍ನಲ್ಲೇ ಪ್ರಯಾಣ ಬೆಳೆಸಿದ್ದಾರೆ.

Related Articles

- Advertisement -

Latest Articles