Wednesday, March 22, 2023
spot_img
- Advertisement -spot_img

ಸೆಮಿನಾರ್‌ನಲ್ಲಿ ದೇಶದ ವಿರುದ್ಧ ಮಾತನಾಡಲಿಲ್ಲ: ಸಂಸದ ರಾಹುಲ್ ಗಾಂಧಿ

ನವದೆಹಲಿ : ನಾನು ಲಂಡನ್ ಸೆಮಿನಾರ್‌ನಲ್ಲಿ ಭಾರತದ ವಿರುದ್ಧ ಏನನ್ನೂ ಮಾತನಾಡಲಿಲ್ಲ. ಅವರು ಅವಕಾಶ ನೀಡಿದರೆ ನಾನು ಸಂಸತ್ತಿನ ಒಳಗೆ ಮಾತನಾಡುತ್ತೇನೆ ಎಂದು ವಯನಾಡ್ ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ.

ಯುನೈಟೆಡ್ ಕಿಂಗ್‌ಡಂನಲ್ಲಿ ನೀಡಿದ ಹೇಳಿಕೆಗಳಿಗೆ ರಾಹುಲ್ ಕ್ಷಮೆಯಾಚಿಸಬೇಕೆಂದು ಬಿಜೆಪಿ ಸಂಸದರು ಒತ್ತಾಯಿಸಿದ್ದು, ಇದಕ್ಕೆ ಪ್ರತಿಕ್ರಿಯಿಸಿದ್ದಾರೆ. ರಾಹುಲ್ ಗಾಂಧಿ ಏನು ಹೇಳುತ್ತಾರೋ ಅದೇ ಭಾಷೆಯನ್ನು ದೇಶ ಮತ್ತು ಹೊರಗಿನ ಭಾರತ ವಿರೋಧಿಗಳು ಬಳಸುತ್ತಾರೆ” ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿ, ರಾಹುಲ್ ಗಾಂಧಿ ಕ್ಷಮೆ ಕೇಳುವುದಿಲ್ಲ ಎಂದು ಕಾಂಗ್ರೆಸ್ ಹೇಳಿದೆ. ದಾನಿ ವಿಚಾರದಲ್ಲಿ ಜೆಪಿಸಿ ತನಿಖೆಯ ನಮ್ಮ ಬೇಡಿಕೆ ನಿರ್ಲಕ್ಷಿಸಿ ಸಂಸತ್ತಿಗೆ ಅವಕಾಶ ನೀಡದಿರುವುದು ಅವರ ಪಿತೂರಿ. ಅವರು ನಿರುದ್ಯೋಗ ಮತ್ತು ಹಣದುಬ್ಬರದ ಸಮಸ್ಯೆ ಚರ್ಚಿಸಲು ಬಯಸುವುದಿಲ್ಲ. ಈ ಹಿಂದೆ ಹಲವಾರು ಸಂದರ್ಭಗಳಲ್ಲಿ ಮೋದಿ ವಿದೇಶಗಳಲ್ಲಿ ಭಾರತದ ವಿರುದ್ಧ ಮಾತನಾಡಿದ್ದರು. ರಾಹುಲ್ ಗಾಂಧಿ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

Related Articles

- Advertisement -

Latest Articles