Wednesday, May 31, 2023
spot_img
- Advertisement -spot_img

ವಯನಾಡ್‌ ಲೋಕಸಭಾ ಕ್ಷೇತ್ರಕ್ಕೆ ಇಂದು ರಾಹುಲ್ ಗಾಂಧಿ ಭೇಟಿ

ಕೇರಳ : ಕಾಂಗ್ರೆಸ್ ಮಾಜಿ ಸಂಸದ ರಾಹುಲ್ ಗಾಂಧಿ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಇಂದು ಭೇಟಿ ನೀಡಲಿದ್ದಾರೆ. ಅನರ್ಹಗೊಂಡ ನಂತರ ಮೊದಲ ಬಾರಿಗೆ ಭೇಟಿ ನೀಡಲಿದ್ದು, ಕಾಂಗ್ರೆಸ್ ನಾಯಕರು ರಾಹುಲ್ ಭೇಟಿಗೆ ಭರ್ಜರಿ ವ್ಯವಸ್ಥೆ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ಉಪನಾಮದ ಬಗ್ಗೆ ಹೀಯಾಳಿಸಿದ್ದಕ್ಕೆ ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್ ನ್ಯಾಯಾಲಯವು ರಾಹುಲ್ ಗಾಂಧಿಯನ್ನು ದೋಷಿ ಎಂದು ಘೋಷಿಸಿತ್ತು. ಇದರಿಂದ ರಾಹುಲ್ ಗಾಂಧಿಯವರು ಸಂಸತ್ತಿನಿಂದ ಅನರ್ಹಗೊಂಡರು. ಲೋಕಸಭೆಯ ಸಂಸದರಾಗಿ ಅನರ್ಹಗೊಂಡಾಗಿನಿಂದ ನರೇಂದ್ರ ಮೋದಿ ನಾಯಕತ್ವದ ಮೇಲೆ ತಮ್ಮ ಟೀಕಾ ದಾಳಿಯನ್ನು ನಡೆಸುತ್ತಿದ್ದಾರೆ.

ವಿಚಾರಣೆ ನಡೆಸಿದ ನ್ಯಾಯಾಧೀಶ ಎಚ್. ವರ್ಮಾ ಅವರಿದ್ದ ಪೀಠ ಪ್ರಕರಣದಲ್ಲಿ ರಾಹುಲ್ ಗಾಂಧಿಯನ್ನು ದೋಷಿ ಎಂದು ಘೋಷಿಸಿತ್ತು. ಇದಲ್ಲದೇ, ಗಾಂಧಿಗೆ 2 ವರ್ಷಗಳ ಜೈಲು ಶಿಕ್ಷೆ ಮತ್ತು ದಂಡವನ್ನು ವಿಧಿಸಿತ್ತು. ಅಷ್ಟೇ ಅಲ್ಲದೇ ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿ ಅನರ್ಹತೆ ಖಂಡಿಸಿ ಪ್ರತಿಭಟಿಸಿದ್ದರು.

Related Articles

- Advertisement -

Latest Articles