ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೊದಲ ಬಾರಿಗೆ ಇಂದು ಮಧ್ಯಾಹ್ನ 1 ಗಂಟೆಗೆ ಸುದ್ದಿ ಮಾಧ್ಯಮದವರೊಂದಿಗೆ ಮಾತನಾಡಲಿದ್ದಾರೆ. 2 ವರ್ಷಗಳ ಕಾಲ ಶಿಕ್ಷೆಗೆ ಗುರಿಯಾಗಿರುವ ಕಾರಣ ನಿಯಮದಂತೆ ಸಂಸದ ಸ್ಥಾನದಿಂದ ರಾಹುಲ್ ಗಾಂಧಿ ಅವರನ್ನ ಅನರ್ಹಗೊಳಿಸಿ ಆದೇಶಿಸಲಾಗಿದೆ. ಪ್ರಕರಣದ ನಂತರ ಇದೇ ಮೊದಲ ಬಾರಿಗೆ ಮಾತನಾಡಲಿದ್ದಾರೆ.
ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ಆದೇಶ ಹೊರಡಿಸಿದ ನಂತರ ಮೊದಲ ಬಾರಿಗೆ ಟ್ವೀಟ್ ಮಾಡಿ ಪ್ರತಿಕ್ರಿಯೆ ನೀಡಿದ್ದಾರೆ. ಭಾರತದ ಧ್ವನಿಗಾಗಿ ನಾನು ಹೋರಾಡುತ್ತಿದ್ದೇನೆ. ಇದಕ್ಕಾಗಿ “ಯಾವುದೇ ಬೆಲೆ ತೆರಲು” ಸಿದ್ಧ ಎಂದಿದ್ದರು.
ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಂಡ ರಾಹುಲ್ ಪರವಾಗಿ ದೇಶದ ವಿವಿಧ ಪಕ್ಷಗಳ ನಾಯಕರು ಬೆಂಬಲಕ್ಕೆ ನಿಂತಿದ್ದಾರೆ. ಕರ್ನಾಟಕದ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ, ತಮಿಳುನಾಡಿನ ಸಿಎಂ ಎಂಕೆ ಸ್ಟಾಲಿನ್, ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ರಾಹುಲ್ ಅನರ್ಹತೆ ಆದೇಶ ವಿರೋಧಿಸಿದ್ದಾರೆ. ಅಷ್ಟೇ ಅಲ್ಲದೆ ದೇಶಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.